ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರಪುರದಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ಆರೋಪ: ಅನುಮತಿ ಇದೆಯೇ? ಅಧಿಕಾರಿಗಳು ಪರಿಶೀಲಿಸುತ್ತಾರಾ?

ಯಾದಗಿರಿ : ಜಿಲ್ಲೆಯ ಸುರಪುರದಲ್ಲಿ ಮಣ್ಣು ಗಣಿಗಾರಿಕೆ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದೆ.ಸುರಪುರ ನಗರ ಸೇರಿದಂತೆ ಸುತ್ತಮುತ್ತಲಿನ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ಮಣ್ಣು ಅಗೆದು ಸಾಗಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ನಗರದ ಖಾನಾಪುರ (ಎಸ್ ಹೆಚ್), ಎಪಿಎಂಸಿ ಪಕ್ಕದಲ್ಲಿ ಹಾಗೂ ಗುಡಿಹಾಳ ಗ್ರಾಮದ ಹೊರವಲಯದಲ್ಲಿ ಮಣ್ಣು ತೆಗೆಯಲಾಗುತ್ತಿದೆ ಎನ್ನಲಾಗಿದ್ದು, ಈ ಕಾರ್ಯಾಚರಣೆಗೆ ಅಧಿಕೃತ ಅನುಮತಿ ಇದೆಯೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಒಂದೆಡೆ ಮಣ್ಣು ಅಗೆತದ ಆರೋಪಗಳು ಕೇಳಿಬರುತ್ತಿದ್ದರೆ, ಮತ್ತೊಂದೆಡೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವಾಸ್ತವಾಂಶ ಬಹಿರಂಗಪಡಿಸಬೇಕೆಂಬ ಒತ್ತಾಯವೂ ಹೆಚ್ಚಾಗಿದೆ.

ಅನುಮತಿ ಪಡೆದೇ ಮಣ್ಣು ತೆಗೆಯಲಾಗುತ್ತಿದೆಯೇ? ನಿಯಮಗಳನ್ನು ಪಾಲಿಸಲಾಗುತ್ತಿದೆಯೇ? ಅಥವಾ ನಿಯಮ ಉಲ್ಲಂಘಿಸಿ ಮಣ್ಣು ಸಾಗಣೆ ನಡೆಯುತ್ತಿದೆಯೇ?

ಈ ಪ್ರಶ್ನೆಗಳಿಗೆ ಸಂಬಂಧಪಟ್ಟ ಇಲಾಖೆಗಳು ಸ್ಪಷ್ಟನೆ ನೀಡಬೇಕಿದೆ.

ಮಣ್ಣು ಅಗೆತದಿಂದ ಭೂಮಿಯ ಸ್ವರೂಪಕ್ಕೆ ಹಾಗೂ ಪರಿಸರಕ್ಕೆ ಹಾನಿಯಾಗುವ ಸಾಧ್ಯತೆ ಇರುವುದರಿಂದ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಸ್ಥಳಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ, ಅಕ್ರಮ ನಡೆದಿರುವುದು ದೃಢಪಟ್ಟರೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಿದೆ.

ಇಲ್ಲವಾದರೆ, ಸುರಪುರ ಸುತ್ತಮುತ್ತ ನಡೆಯುತ್ತಿದೆ ಎನ್ನಲಾದ ಮಣ್ಣು ಅಗೆತದ ಆರೋಪಗಳಿಗೆ ಉತ್ತರ ನೀಡುವವರು ಯಾರು?

ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುತ್ತಾರೆಯೇ? ಅಥವಾ ಸಾರ್ವಜನಿಕರ ಪ್ರಶ್ನೆಗಳು ಪ್ರಶ್ನೆಗಳಾಗಿಯೇ ಉಳಿಯುತ್ತವೆಯೇ ಉಳಿಯುತ್ತವೆಯೇ ಎನ್ನುವುದು ಕಾದು ನೋಡಬೇಕಿದೆ.

Edited By :
PublicNext

PublicNext

21/10/2026 08:17 am

Cinque Terre

8.28 K

Cinque Terre

0

ಸಂಬಂಧಿತ ಸುದ್ದಿ