ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನೂತನ ಜಿಲ್ಲಾಸ್ಪತ್ರೆಗೆ ಹಳೆ ಆಸ್ಪತ್ರೆಯ ಪರಿಕರಗಳ ಅಳವಡಿಕೆಗೆ ಕರವೇ ಆಕ್ಷೇಪ - ಪ್ರವೀಣ್ ಶೆಟ್ಟಿ ಎಚ್ಚರಿಕೆ

ಉಡುಪಿ: ಅಜ್ಜರಕಾಡಿನ ನೂತನ ಜಿಲ್ಲಾ ಆಸ್ಪತ್ರೆಯನ್ನು ಸುಸಜ್ಜಿತ ವೈದ್ಯಕೀಯ ಸೌಲಭ್ಯಗಳೊಂದಿಗೆ ಆರಂಭಿಸಿ, ರೋಗಿಗಳಿಗೆ ಚಿಕಿತ್ಸೆ ನೀಡುವ ಪ್ರಕ್ರಿಯೆ ಆರಂಭಿಸಬೇಕು. ಹೊಸ ಆಸ್ಪತ್ರೆಯಲ್ಲಿ ಯಾವುದೇ ಕಾರಣಕ್ಕೂ ಹಳೆ ಆಸ್ಪತ್ರೆಯ ಪರಿಕರಗಳನ್ನು ಉಪಯೋಗಿಸಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಗ್ರಹಿಸಿದರು.

ಈ ಕುರಿತು ಪಬ್ಲಿಕ್ ನೆಕ್ಸ್ಟ್ ಮಾಧ್ಯಮದ ಜೊತೆ ಮಾತನಾಡಿದ ಅವರು, ಜಿಲ್ಲಾಸ್ಪತ್ರೆಯನ್ನು ಆರಂಭಿಸುವಂತೆ ಆಗ್ರಹಿಸಿ ಕರವೇ ನಡೆಸಿದ ಹೋರಾಟದ ಫಲವಾಗಿ ಜಿಲ್ಲಾಡಳಿತ ನವೆಂಬರ್ 5ರೊಳಗೆ ಆಸ್ಪತ್ರೆ ಆರಂಭಿಸುವ ಭರವಸೆ ನೀಡಿದೆ. ಆದರೆ, ತರಾತುರಿಯಲ್ಲಿ ಆಸ್ಪತ್ರೆ ಆರಂಭಿಸುವ ಉದ್ದೇಶದಿಂದ ಹಳೆಯ ಜಿಲ್ಲಾಸ್ಪತ್ರೆಯ ಪರಿಕರಗಳನ್ನು ನೂತನ ಕಟ್ಟಡಕ್ಕೆ ತಂದು ಅಳವಡಿಸುವ ಕೆಲಸ ನಡೆಯುತ್ತಿದೆ. ಇದು ಖಂಡನೀಯ ಎಂದರು.

ನೂತನ ಜಿಲ್ಲಾಸ್ಪತ್ರೆಯನ್ನು ಅಗತ್ಯ ವೈದ್ಯಕೀಯ ಉಪಕರಣಗಳು ಹಾಗೂ ಸುಸಜ್ಜಿತ ಸೌಲಭ್ಯಗಳೊಂದಿಗೆ ಆರಂಭಿಸಬೇಕು ಎಂಬುದು ಸಂಘಟನೆಯ ಪ್ರಮುಖ ಬೇಡಿಕೆಯಾಗಿದೆ. ಕೇವಲ ಕಟ್ಟಡವನ್ನು ಸಿದ್ಧಪಡಿಸಿ, ಹಳೆಯ ಪರಿಕರಗಳನ್ನು ಸ್ಥಳಾಂತರಿಸುವ ಮೂಲಕ ಆಸ್ಪತ್ರೆ ಆರಂಭಿಸಿದರೆ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುವುದಿಲ್ಲ. ಆದ್ದರಿಂದ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಯು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ನಿಗದಿತ ಗಡುವಿನೊಳಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಪ್ರವೀಣ್ ಶೆಟ್ಟಿ ಎಚ್ಚರಿಕೆ ನೀಡಿದರು.

Edited By :
PublicNext

PublicNext

21/10/2026 01:36 pm

Cinque Terre

8.74 K

Cinque Terre

0

ಸಂಬಂಧಿತ ಸುದ್ದಿ