ಬೈಲಹೊಂಗಲ : ಯುವಕ-ಯುವತಿಯರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ನಿರೀಕ್ಷೆಯಲ್ಲಿರುವ ವಿವಿಧ ಕ್ಷೇತ್ರಗಳ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಅ. 23ರಂದು ಪಟ್ಟಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾಭ್ಯಾಸ ಪಡೆದಿರುವ ಯುವಜನತೆಗೆ ಉದ್ಯೋಗ ದೊರಕದಿರುವುದು ಸೂಕ್ತ ಉದ್ಯೋಗದ ಕೊರತೆಯಲ್ಲ, ಬದಲಾಗಿ ಸೂಕ್ತ ಅವಕಾಶಗಳ ಕೊರತೆಯಾಗಿದೆ. ಇಂತಹ ಉದ್ಯೋಗಾಕಾಂಕ್ಷಿಗಳಿಗೆ ವಿವಿಧ ಕಂಪನಿಗಳು ಹಾಗೂ ಸಂಸ್ಥೆಗಳಿಂದ ನೇರ ಸಂಪರ್ಕ ಕಲ್ಪಿಸಿ, ಅವರ ವಿದ್ಯಾರ್ಹತೆ, ಕೌಶಲ್ಯ ಮತ್ತು ಪ್ರತಿಭೆಗೆ ಅನುಗುಣವಾಗಿ ಉದ್ಯೋಗ ಪಡೆಯಲು ಅವಕಾಶ ಒದಗಿಸುವುದು ಉದ್ಯೋಗ ಮೇಳದ ಪ್ರಮುಖ ಉದ್ದೇಶವಾಗಿದೆ ಎಂದರು.
ಉದ್ಯೋಗ ಮೇಳವು ಅ. 23ರಂದು ಬೆಳಿಗ್ಗೆ 8 ಗಂಟೆಗೆ ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಪಾಲಿಟೆಕ್ನಿಕ್ (ಡಿಪ್ಲೊಮಾ) ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿಗಳು ಹಾಗೂ ಸಂಸ್ಥೆಗಳು ಭಾಗವಹಿಸಲಿವೆ. ಯುವಜನತೆಗೆ ಉದ್ಯೋಗ ಕಲ್ಪಿಸುವುದರ ಜತೆಗೆ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಯುವಜನರ ಉಜ್ವಲ ಭವಿಷ್ಯವೇ ನಮ್ಮ ಆದ್ಯತೆಯಾಗಿದ್ದು, ಅವರಿಗೆ ಸೂಕ್ತ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ ಯುವಕ ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
Kshetra Samachara
21/10/2026 06:39 pm
LOADING...