ಕುಂದಗೋಳ: ಬೋರ್‌ವೆಲ್‌ಗಳ ಕೇಬಲ್ ಕಟ್ ಮಾಡಿ ಕಳ್ಳತನ ಮಾಡುತ್ತಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಹೌದು...! ಕುಂದಗೋಳ ತಾಲೂಕಿನ ಇಂಗಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಕ್ಕೆ ನೀರು ಸರಬರಾಜು ಮಾಡುವ ಬೋರ್‌ವೆಲ್‌ನ ಕೇಬಲ್ ಕತ್ತರಿಸಿ ಕೊಂಡೊಯ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ತಾಲೂಕಿನ ವಿವಿಧೆಡೆ ರಸ್ತೆ ಬದಿಯಲ್ಲಿರುವ ಬೋರ್‌ವೆಲ್‌ಗಳ ಕೇಬಲ್ ಕಳವು ಪ್ರಕರಣಗಳು ನಡೆಯುತ್ತಿವೆ ಎನ್ನಲಾಗಿದ್ದು, ಇದರಿಂದ ಗ್ರಾಮೀಣ ಭಾಗದಲ್ಲಿ ನೀರು ಸರಬರಾಜಿಗೆ ತೊಂದರೆಯಾಗುವ ಆತಂಕ ಎದುರಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಅಳವಡಿಸಿರುವ ಬೋರ್‌ವೆಲ್‌ಗಳೇ ಕಳ್ಳರ ಗುರಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಸಾರ್ವಜನಿಕ ಆಸ್ತಿಗೆ ರಕ್ಷಣೆ ನೀಡುವವರು ಯಾರು? ಇಂತಹ ಘಟನೆಗಳು ಮರುಕಳಿಸುತ್ತಿದ್ದರೂ ಕಳ್ಳತನ ತಡೆಯಲು ಯಾವ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.
ಒಟ್ಟಾರೆ ಇಂಗಳಗಿ ಗ್ರಾಮದಲ್ಲಿ ನಡೆದಿರುವ ಕೇಬಲ್ ಕಳವು ಆರೋಪದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ, ತಪ್ಪಿತಸ್ಥರನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.
ಶಾನು ಯಲಿಗಾರ, ಪಬ್ಲಿಕ್ ನೆಕ್ಸ್ಟ್ ಕುಂದಗೋಳ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
22/10/2026 07:46 am
LOADING...