ಬಳ್ಳಾರಿ : ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಭತ್ತದ ಮೂಟೆಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಕಂಪ್ಲಿ ಪಟ್ಟಣದ ವಾಲ್ಮೀಕಿ ಸರ್ಕಲ್ ಬಳಿ ನಡೆದಿದೆ.
ಕಂಪ್ಲಿಯಿಂದ ದಾವಣಗೆರೆ ಕಡೆಗೆ ಭತ್ತದ ಮೂಟೆಗಳನ್ನು ತುಂಬಿಕೊಂಡು ತೆರಳುತ್ತಿದ್ದ ಕೆಎ-34, ಎ-4377 ನೋಂದಣಿ ಸಂಖ್ಯೆಯ ಲಾರಿಯ ಚಾಲಕ, ದ್ವಿಚಕ್ರ ವಾಹನ ಸವಾರನ ರಕ್ಷಣೆಗಾಗಿ ಲಾರಿಯನ್ನು ಡಿವೈಡರ್‌ಗೆ ಹತ್ತಿಸಿದ್ದಾನೆ ಎನ್ನಲಾಗಿದೆ.
ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಕಂಪ್ಲಿ ಪೊಲೀಸರು ಪರಿಶೀಲನೆ ನಡೆಸಿ, ಸಂಚಾರಕ್ಕೆ ಅಡ್ಡಿಯಾಗಿದ್ದ ಲಾರಿಯನ್ನು ತೆರವುಗೊಳಿಸಿ, ಸಂಚಾರ ಸುಗಮಗೊಳಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಹೊನ್ನುರಸ್ವಾಮಿ ಕೆ.ಟಿ. ಪಬ್ಲಿಕ್ ನೆಕ್ಸ್ಟ್, ಬಳ್ಳಾರಿ
PublicNext
22/10/2026 10:36 am
LOADING...