ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಪ್ಪಳ : - ಮೈಸೂರು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಪರೀಕ್ಷಾ ಅಕ್ರಮದ ಆರೋಪ - ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌ಗೂ ಪರವಾನಗಿ

ಕೊಪ್ಪಳ : ನಗರದ ಹೊರವಲಯದಲ್ಲಿನ ಕಾಲೇಜೊಂದರಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು ನಡೆಯುತ್ತಿದ್ದು, ಸಾಮೂಹಿಕ ನಕಲು ಮಾಡಲು ಅವಕಾಶ ನೀಡಲಾಗಿದೆ. ಜೊತೆಗೆ, ಪರೀಕ್ಷಾರ್ಥಿಗಳು ಮೊಬೈಲ್ ಮುಂದಿಟ್ಟುಕೊಂಡು ಪರೀಕ್ಷೆ ಬರೆಯುತ್ತಿರುವುದಕ್ಕೆ ಅನೇಕ ಪರೀಕ್ಷಾರ್ಥಿಗಳಿಂದಲೇ ವಿರೋಧ ವ್ಯಕ್ತವಾಗಿದೆ.

ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಪರೀಕ್ಷೆಗಳು ನಡೆಯುತ್ತಿದ್ದು, ಕೊಪ್ಪಳ ಮತ್ತು ಹಲಗೇರಿ ಮಧ್ಯದಲ್ಲಿನ ಎಸ್.ಎ. ನಿಂಗೋಜಿ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ಕಳೆದ ಒಂದು ವಾರದಿಂದ ಪರೀಕ್ಷೆಗಳು ನಡೆಯುತ್ತಿದ್ದು, ಬಿಎ, ಬಿಎಸ್ಸಿ, ಬಿ.ಕಾಂ ಹಾಗೂ ಎಂ.ಎ, ಎಂಎಸ್ಸಿ, ಎಂ.ಕಾಂ ಸೇರಿದಂತೆ ನಾನಾ ವಿಭಾಗಗಳ ಪರೀಕ್ಷೆಗಳು ನಡೆಯುತ್ತಿವೆ. ಪರೀಕ್ಷಾ ಕೊಠಡಿಯ ಸಿಬ್ಬಂದಿಯೇ ಮುಂದೆ ನಿಂತು ನಕಲು ಮಾಡಲು ಅವಕಾಶ ನೀಡಿದ್ದು, ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಕೊಂಡೊಯ್ಯಲೂ ಅವಕಾಶ ನೀಡಲಾಗಿದೆ. ಈ ಪರೀಕ್ಷಾ ವ್ಯವಸ್ಥೆಯ ಬಗ್ಗೆ ಅನೇಕ ಪರೀಕ್ಷಾರ್ಥಿಗಳೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತ್ಯೇಕ ಶುಲ್ಕ: ಯಾವುದೇ ಪರೀಕ್ಷೆಗಳು ನಡೆದರೂ, ಪ್ರವೇಶ ಪತ್ರದ ನೋಂದಣಿ ಸಂಖ್ಯೆಗೆ ಅನುಗುಣವಾಗಿ ಪರೀಕ್ಷಾರ್ಥಿಗಳು ಕುಳಿತುಕೊಳ್ಳಲು ವ್ಯವಸ್ಥೆ ಮಾಡಬೇಕು. ಆದರೆ, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಪರೀಕ್ಷಾ ಕೇಂದ್ರದಲ್ಲಿ ನೋಂದಣಿ ಸಂಖ್ಯೆಯೇ ಇಲ್ಲದಂತೆ ಪರೀಕ್ಷೆ ನಡೆಸಲಾಗುತ್ತಿದೆ. ಒಂದೇ ಬೆಂಚ್‌ನಲ್ಲಿ ಕನಿಷ್ಠ ನಾಲ್ವರು ಅಭ್ಯರ್ಥಿಗಳು ಕುಳಿತು ಪರೀಕ್ಷೆ ಬರೆಯುತ್ತಾರೆ.

ಇನ್ನು, ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ನೀಡುವುದಕ್ಕಾಗಿಯೇ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರದ ಸಿಬ್ಬಂದಿ ಪ್ರತ್ಯೇಕ ಶುಲ್ಕ ವಸೂಲಿ ಮಾಡುತ್ತಾರೆ ಎಂಬುದು ವಿದ್ಯಾರ್ಥಿಗಳ ಆರೋಪ. ಪ್ರತ್ಯೇಕ ಶುಲ್ಕ ನೀಡುವುದಿಲ್ಲ ಎನ್ನುವವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡುತ್ತಾರೆ. ಈ ಮೂಲಕ ಇಡೀ ಪರೀಕ್ಷಾ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ ಎಂಬುದು ನಕಲುರಹಿತವಾಗಿ ಪರೀಕ್ಷೆ ನಡೆಸಲು ಒತ್ತಾಯಿಸುತ್ತಿರುವ ವಿದ್ಯಾರ್ಥಿಗಳ ಆಗ್ರಹ.

Edited By : Vinayak Patil
PublicNext

PublicNext

23/10/2026 12:50 pm

Cinque Terre

9.09 K

Cinque Terre

1

ಸಂಬಂಧಿತ ಸುದ್ದಿ