ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಏಷ್ಯನ್ ಗೇಮ್ಸ್‌ನಲ್ಲಿ ಬೆಳಗಾವಿ ಹುಡುಗನಿಗೆ ಕಂಚಿನ ಪದಕ!

ಬೆಳಗಾವಿ: ಅಂತಾರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯ ಪ್ರತಿಭೆ ಸ್ವಾತಿಕ್ ಪಾಟೀಲ್ ಕಂಚಿನ ಪದಕ ಗೆದ್ದು ಕರ್ನಾಟಕದ ಕೀರ್ತಿ ಹೆಚ್ಚಿಸಿದ್ದಾರೆ.

ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ ಮೂಲದ ಸ್ವಾತಿಕ್, 100 ಮೀಟರ್ ಈಜು ಸ್ಪರ್ಧೆಯನ್ನು 1 ನಿಮಿಷ 13.77 ಸೆಕೆಂಡ್‌ಗಳಲ್ಲಿ ಪೂರ್ಣಗೊಳಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಸಾಫ್ಟ್‌ವೇರ್ ಉದ್ಯೋಗದ ಜೊತೆಗೆ ಈಜಿನಲ್ಲೂ ಆಸಕ್ತಿ ಬೆಳೆಸಿಕೊಂಡಿರುವ ಸ್ವಾತಿಕ್, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಯುವಜನತೆಗೆ ಮಾದರಿಯಾಗಿದ್ದಾರೆ. ಬೆಳಗಾವಿಯ ಕ್ರೀಡಾ ಪ್ರತಿಭೆ ಏಷ್ಯನ್ ಮಟ್ಟದಲ್ಲಿ ಮಿಂಚಿರುವುದು ಜಿಲ್ಲೆಯ ಜನರಲ್ಲಿ ಹೆಮ್ಮೆ ಮೂಡಿಸಿದೆ.

Edited By :
PublicNext

PublicNext

23/10/2026 05:09 pm

Cinque Terre

16.77 K

Cinque Terre

0

ಸಂಬಂಧಿತ ಸುದ್ದಿ