ತರೀಕೆರೆ : ಕಾಫಿನಾಡಿನ ತರೀಕೆರೆ ಪಟ್ಟಣದಲ್ಲಿ ವರುಣ ದೇವ ಭರ್ಜರಿಯಾಗಿ ಆರ್ಭಟಿಸಿದ್ದು, ನಿನ್ನೆ ಮಧ್ಯಾಹ್ನ ಆರಂಭವಾದ ಮಳೆ ರಾತ್ರಿಯಿಡೀ ಸುರಿದು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.
ಭಾರೀ ಮಳೆಯ ಪರಿಣಾಮ ಪಟ್ಟಣದ ಪ್ರಮುಖ ರಸ್ತೆಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡು ನದಿಯಂತೆ ಮಾರ್ಪಟ್ಟಿದ್ದವು. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ಮೊಣಕಾಲುದ್ದಕ್ಕೂ ನಿಂತಿದ್ದ ನೀರಿನಲ್ಲೇ ಸವಾರರು ಹಾಗೂ ಸಾರ್ವಜನಿಕರು ಓಡಾಡಲು ಹೈರಾಣಾಗುವಂತಾಯಿತು. ಸದ್ಯ ಹಿಂಗಾರು ಮಳೆಯ ಅಬ್ಬರ ಮುಂದುವರಿಯಲಿದ್ದು, ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
PublicNext
23/10/2026 06:03 pm
LOADING...