ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ: ಲಾರಿ ಹಿಂಬದಿ ಇದ್ದ ಮಕ್ಕಳ ಮೇಲೆ ಹರಿದ ಚಕ್ರ, ಚನ್ನರಾಯನಪಲ್ಲಿ ಗ್ರಾಮದಲ್ಲಿ ದುರಂತ

ಭಾಗ್ಯನಗರ: ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಚನ್ನರಾಯನಪಲ್ಲಿ ಗ್ರಾಮದಲ್ಲಿ ಸಿಮೆಂಟ್ ತುಂಬಿದ ಲಾರಿಯ ಚಕ್ರ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.

ಮೃತ ಮಕ್ಕಳನ್ನು ವಿಷ್ಣು ಮತ್ತು ವಿಜಯ ರಾಜಕುಮಾರ ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸುಮಾರು 7 ಗಂಟೆಯ ವೇಳೆಗೆ ಈ ದುರ್ಘಟನೆ ಸಂಭವಿಸಿದ್ದು, ಲಾರಿಯ ಹಿಂಭಾಗದಲ್ಲಿದ್ದ ಮಕ್ಕಳ ಮೇಲೆ ಲಾರಿಯ ಚಕ್ರ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಎಳೆಯ ವಯಸ್ಸಿನ ಇಬ್ಬರು ಮಕ್ಕಳು ದುರಂತದಲ್ಲಿ ಪ್ರಾಣ ಕಳೆದುಕೊಂಡಿರುವುದು ಗ್ರಾಮಸ್ಥರನ್ನು ದುಃಖಕ್ಕೀಡು ಮಾಡಿದೆ. ಇನ್ನು ಘಟನೆ ವಿಷಯ ತಿಳಿಯುತ್ತಿದ್ದಂತೆ ಬಾಗೇಪಲ್ಲಿಯ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರು ಎಚ್ಚರ ವಹಿಸಲಿ ಮಕ್ಕಳ ಸುರಕ್ಷತೆ ಪ್ರತಿಯೊಬ್ಬ ಪೋಷಕರ ಮೊದಲ ಆದ್ಯತೆಯಾಗಿರಬೇಕು. ವಾಹನಗಳ ಸಂಚಾರದ ವೇಳೆ ಮಕ್ಕಳು ಅಪಾಯಕ್ಕೆ ಸಿಲುಕದಂತೆ ಪೋಷಕರು ಹಾಗೂ ವಾಹನ ಚಾಲಕರು ಹೆಚ್ಚಿನ ಜಾಗ್ರತೆ ವಹಿಸಬೇಕು. ವಿಶೇಷವಾಗಿ ಭಾರೀ ವಾಹನಗಳ ಹಿಂಭಾಗದಲ್ಲಿ ಮಕ್ಕಳು ಇರುವುದನ್ನು ಗಮನಿಸದೆ ವಾಹನ ಚಲಾಯಿಸುವುದು ಗಂಭೀರ ಅಪಾಯಕ್ಕೆ ಕಾರಣವಾಗಬಹುದು.

ಇಂತಹ ದುರ್ಘಟನೆಗಳು ಮರುಕಳಿಸದಂತೆ ವಾಹನ ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸುವುದರ ಜೊತೆಗೆ, ಪೋಷಕರು ಮಕ್ಕಳ ಚಲನವಲನದ ಮೇಲೂ ನಿಗಾ ವಹಿಸಬೇಕು ಎಂಬುದು ಸಾರ್ವಜನಿಕರ ಕಳಕಳಿಯಾಗಿದೆ.

Edited By :
PublicNext

PublicNext

24/10/2026 12:12 pm

Cinque Terre

5.64 K

Cinque Terre

0

ಸಂಬಂಧಿತ ಸುದ್ದಿ