ಕೊಪ್ಪಳ: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಶೇ.92.59ರಷ್ಟು ಮತದಾನವಾಗಿದೆ. ಅ.23ರಂದು ನಡೆದ ಮತದಾನ ಪ್ರಕ್ರಿಯೆಯಲ್ಲಿ ಜಿಲ್ಲೆಯ ಏಳು ತಾಲೂಕುಗಳ 20 ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಒಟ್ಟು 2,714 ಮತದಾರರ ಪೈಕಿ 2,513 ಶಿಕ್ಷಕರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 1,845 ಪುರುಷ ಹಾಗೂ 869 ಮಹಿಳಾ ಮತದಾರರಿದ್ದರು. ಇವರಲ್ಲಿ 1,732 ಪುರುಷರು (ಶೇ.93.88) ಮತ್ತು 781 ಮಹಿಳೆಯರು (ಶೇ.89.87) ಮತ ಚಲಾಯಿಸಿದ್ದಾರೆ.
ಬೆಳಗ್ಗೆ 8 ಗಂಟೆಗೆ ಆರಂಭವಾದ ಮತದಾನ ಸಂಜೆ 4 ಗಂಟೆಗೆ ಮುಕ್ತಾಯಗೊಂಡಿತು. ಬೆಳಗ್ಗೆ 10 ಗಂಟೆಗೆ ಶೇ.12.42ರಷ್ಟು ಮತದಾನವಾಗಿದ್ದರೆ, ಮಧ್ಯಾಹ್ನ 12 ಗಂಟೆಗೆ ಶೇ.49.89ಕ್ಕೆ ಏರಿಕೆಯಾಗಿತ್ತು. ಮಧ್ಯಾಹ್ನ 2 ಗಂಟೆ ವೇಳೆಗೆ ಶೇ.78.11ರಷ್ಟು ಮತದಾನ ದಾಖಲಾಗಿದ್ದು, ಅಂತಿಮವಾಗಿ ಶೇ.92.59ರಷ್ಟು ಮತದಾನವಾಗಿದೆ.
ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಕೊಪ್ಪಳ ತಾಲೂಕು ಪಂಚಾಯಿತಿ, ಕುಕನೂರು ಹಾಗೂ ಅಳವಂಡಿಯ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಶಾಂತಿಯುತವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Kshetra Samachara
24/10/2026 12:34 pm
LOADING...