ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಲಹೊಂಗಲ: ಬೃಹತ್ ಉದ್ಯೋಗ ಮೇಳ; 400ಕ್ಕೂ ಹೆಚ್ಚು ಅಭ್ಯರ್ಥಿಗಳ ಆಯ್ಕೆ

ಬೈಲಹೊಂಗಲ: ಯುವಜನರಿಗೆ ಸೂಕ್ತ ಉದ್ಯೋಗ ದೊರಕಿಸಿಕೊಡುವಲ್ಲಿ ಉದ್ಯೋಗ ಮೇಳಗಳು ಉತ್ತಮ ವೇದಿಕೆಯಾಗಿದ್ದು, ಉದ್ಯೋಗಾಕಾಂಕ್ಷಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ವೃತ್ತಿಜೀವನ ರೂಪಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ ಹೇಳಿದರು.

ನಗರದ ಕೆಎಲ್‌ಇ ಪಾಲಿಟೆಕ್ನಿಕ್ ಡಿಪ್ಲೊಮಾ ಮಹಾವಿದ್ಯಾಲಯದಲ್ಲಿ ಡಾ. ವಿಶ್ವನಾಥ ಪಾಟೀಲ ಅಭಿಮಾನಿ ಬಳಗ ಹಾಗೂ ಕೆಎಲ್‌ಇ ಪಾಲಿಟೆಕ್ನಿಕ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಡಿಪ್ಲೊಮಾ, ಪದವಿ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ ಎಂದರು.

ನ್ಯಾಯವಾದಿ ಎಫ್.ಎಸ್. ಸಿದ್ದನಗೌಡರ ಹಾಗೂ ಉದ್ಯಮಿ ಬಾಳನಗೌಡ ಪಾಟೀಲ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾವಂತ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಯೋಜಿಸಿರುವ ಈ ಮೇಳ ಶ್ಲಾಘನೀಯವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಉದ್ಯೋಗಗಳ ಅವಕಾಶ ಸೀಮಿತವಾಗಿರುವುದರಿಂದ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಪಡೆಯಲು ಇಂತಹ ಮೇಳಗಳು ಸಹಕಾರಿಯಾಗಿವೆ. ಉದ್ಯೋಗ ದೊರೆತರೆ ಯುವಕರು ಸ್ವಾವಲಂಬಿಗಳಾಗುವುದರ ಜೊತೆಗೆ ಕುಟುಂಬದ ಆರ್ಥಿಕ ಸ್ಥಿತಿಯೂ ಸುಧಾರಿಸಲಿದೆ ಎಂದರು. ರಾಜ್ಯ ಹಾಗೂ ಹೊರರಾಜ್ಯಗಳ ವಿವಿಧ ಪ್ರದೇಶಗಳಿಂದ ಆಗಮಿಸಿದ್ದ ಸುಮಾರು 12 ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದವು.

ಡಿಪ್ಲೊಮಾ, ಬಿ.ಇ., ಬಿ.ಎಸ್ಸಿ., ಬಿ.ಕಾಂ. ಸೇರಿದಂತೆ ವಿವಿಧ ಪದವಿ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ 1,000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಯಿತು. ಈ ಪೈಕಿ 400ಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಂಪನಿಗಳ ಪ್ರತಿನಿಧಿಗಳು ಕ್ರಮ ಕೈಗೊಂಡರು. ಕಾಲೇಜಿನ ಪ್ರಾಚಾರ್ಯ ಶ್ರೀಧರ ನಿರಡಿ, ವಿ.ಐ. ಪಾಟೀಲ ಅಭಿಮಾನಿ ಬಳಗದ ಸದಸ್ಯರು ಇದ್ದರು.

Edited By :
PublicNext

PublicNext

24/10/2026 01:01 pm

Cinque Terre

6.39 K

Cinque Terre

0

ಸಂಬಂಧಿತ ಸುದ್ದಿ