ರಾಯಚೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕಲ್ಲೂರು ವಲಯದ ಗೊನ್ವರ್ ಕಾರ್ಯಕ್ಷೇತ್ರದಲ್ಲಿ ನಿರ್ಮಿಸಲಾದ ವಾತ್ಸಲ್ಯ ಮನೆಯನ್ನು ಫಲಾನುಭವಿ ಯಂಕಮ್ಮ ಅವರಿಗೆ ಹಸ್ತಾಂತರಿಸಲಾಯಿತು.
ರಾಯಚೂರು ಜಿಲ್ಲಾ ನಿರ್ದೇಶಕ ರಾಘವೇಂದ್ರ ಪಟಗಾರ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಮರೇಶ್ ಎಂ. ಹಾಗೂ ಯೋಜನಾಧಿಕಾರಿ ಜಗದೀಶ್ ಭಂಡಾರಿ ಅವರು ಮನೆ ಉದ್ಘಾಟಿಸಿ, ಯಂಕಮ್ಮ ಅವರಿಗೆ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಜಿಲ್ಲಾ ನಿರ್ದೇಶಕ ರಾಘವೇಂದ್ರ ಪಟಗಾರ, ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಗ್ರಾಮೀಣ ಭಾಗದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶದಿಂದ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಈ ಯೋಜನೆಗಳಿಂದ ರಾಜ್ಯದ ಲಕ್ಷಾಂತರ ಜನರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ ಎಂದರು.
ಯೋಜನಾಧಿಕಾರಿ ಜಗದೀಶ್ ಭಂಡಾರಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ಹಲವು ಜನಪರ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿ ವಾತ್ಸಲ್ಯ ಯೋಜನೆಯ ಮೂಲಕ ನಿರ್ಗತಿಕರಿಗೆ ಮಾಸಾಶನ ಹಾಗೂ ವಸತಿ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಬಿ. ಮುರಾರಿ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜ್, ಗ್ರಾಮದ ಮುಖಂಡರಾದ ದೊಡ್ಡನಗೌಡ, ಶೇಖರಯ್ಯ ಸ್ವಾಮಿ ಹಿರೇಮಠ, ಅಂಬರೀಶ್ ಬಸಾಪುರ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ವೀರೇಶ್ ಸೌದ್ರಿ, ಎಪಿಎಂಸಿ ಮಸ್ಕಿಯ ನಿರ್ದೇಶಕ ಅಂಬರೇಶ್ ಗೌಂಡಿ, ಒಕ್ಕೂಟದ ಅಧ್ಯಕ್ಷೆ ಸುಜಾತಾ, ಉಪಾಧ್ಯಕ್ಷೆ ಮಲ್ಲಮ್ಮ, ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಖಾ, ವಲಯದ ಮೇಲ್ವಿಚಾರಕಿ ಹೇಮಾ, ತಾಲೂಕು ನೋಡಲ್ ಅಧಿಕಾರಿ ನಿರಂಜನ್, ಸೇವಾ ಪ್ರತಿನಿಧಿಗಳು, ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
PublicNext
24/10/2026 03:54 pm