ಶಿರಸಿ : ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಶಾಲಾ ವಿದ್ಯಾರ್ಥಿಗಳ ವೈಯಕ್ತಿಕ ವಿಭಾಗದ ಕ್ರೀಡಾಕೂಟದ ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್ ನ 9 ನೇ ತರಗತಿಯ ವಿದ್ಯಾರ್ಥಿನಿ ಸಾಧನಾ ಗೌಡ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಹಾಗೆಯೇ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾಳೆ.
ವಿದ್ಯಾರ್ಥಿನಿ ಸಾಧನಾಳ ಸಾಧನೆಗೆ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲೆಯ ಸಂಸ್ಥಾಪಕ ಕಾರ್ಯದರ್ಶಿಗಳಾದ ಶ್ರೀ ಎಲ್ ಎಂ ಹೆಗಡೆ, ಅಧ್ಯಕ್ಷರಾದ ಶ್ರೀ ಎಸ್ ಆರ್ ಹೆಗಡೆ, ಸಿ ಇ ಒ ಶ್ರೀಮತಿ ವಿದ್ಯಾ ನಾಯ್ಕ್, ಆಡಳಿತಾಧಿಕಾರಿ ದಿವ್ಯಾ ಹೆಗಡೆ , ಮುಖ್ಯೋಪಾಧ್ಯಾಯರುಗಳಾದ ರವೀಂದ್ರ ಭಟ್, ಕಲ್ಪನಾ ಹೆಗಡೆ , ಶಿಕ್ಷಕರು,
ದೈಹಿಕ ಶಿಕ್ಷಣ ಶಿಕ್ಷಕ ಯೋಗೇಶ್ ನಾಯ್ಕ ,
ಪಾಲಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿ ರಾಜ್ಯ ಮಟ್ಟಕ್ಕೆ ಶುಭ ಹಾರೈಸಿದ್ದಾರೆ.
PublicNext
24/10/2026 06:28 pm
LOADING...