ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಅರಣ್ಯ ಇಲಾಖೆ ಸಿಬ್ಬಂದಿ ನೇಣಿಗೆ ಶರಣು

ಧಾರವಾಡ : ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕುಮಾರೇಶ್ವರ ನಗರದಲ್ಲಿ ನಡೆದಿದೆ.

ಧಾರವಾಡ ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ವಿಠ್ಠಲ ಝೋನಿ ಎಂಬುವವರೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ವಿಠ್ಠಲ ಅವರು ಈ ಹಿಂದೆ ಅರಣ್ಯ ಇಲಾಖೆ ನೌಕರರ ಸಂಘದ ಅಧ್ಯಕ್ಷರೂ ಆಗಿದ್ದರು. ಕಳೆದ ರಾತ್ರಿ ತಮ್ಮ ಮನೆಯಲ್ಲೇ ಇವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡದ ಶವಾಗಾರಕ್ಕೆ ಸಾಗಿಸಲಾಗಿದೆ. ಈ ಘಟನೆ ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

25/10/2026 11:47 am

Cinque Terre

36.88 K

Cinque Terre

4

ಸಂಬಂಧಿತ ಸುದ್ದಿ