ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುವಕರ ಮೇಲೆ ಗುಂಪಿನಿಂದ ಹಲ್ಲೆ; ದೃಶ್ಯ ಮೊಬೈಲ್‌ನಲ್ಲಿ ಸೆರೆ! ಯುವತಿ ವಿಚಾರದಲ್ಲಿ ಹಲ್ಲೆ ಆರೋಪ

ಮೈಸೂರು : ಯುವತಿ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಮೈಸೂರಿನ ಮಾನಸ ಗಂಗೋತ್ರಿಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಹಲ್ಲೆ ನಡೆಸಿದ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಯುವತಿ ವಿಚಾರವಾಗಿ ಯುವಕರನ್ನು ಕಾಲೇಜಿಗೆ ಕರೆಸಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ವೇಳೆ ಘಟನೆಗೆ ಯಾವುದೇ ಸಂಬಂಧವಿಲ್ಲದ ಯುವಕನ ಮೇಲೂ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ಹಲ್ಲೆ ನಡೆಸುವ ಸಂದರ್ಭದಲ್ಲಿ ಯುವಕನ ಬೈಕ್ ಕೆಳಗೆ ಬೀಳಿಸಲಾಗಿದೆ. ಇದನ್ನು ಪ್ರಶ್ನಿಸಿದ ಮತ್ತೊಬ್ಬ ಯುವಕನಿಗೂ ಗುಂಪು ಹಲ್ಲೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Edited By :
PublicNext

PublicNext

25/10/2026 03:22 pm

Cinque Terre

13.13 K

Cinque Terre

0

ಸಂಬಂಧಿತ ಸುದ್ದಿ