ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಳಕಾಲ್ಮುರು: 22 ವರ್ಷಗಳ ಬಳಿಕ ದರೋಡೆ ಆರೋಪಿ ಸೆರೆ; ಪೊಲೀಸರಿಗೆ ಎಸ್ಪಿ ಪ್ರಶಂಸೆ

ಮೊಳಕಾಲ್ಮುರು: ಸುಮಾರು 22 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಬಸ್ ದರೋಡೆ ಪ್ರಕರಣದ ಆರೋಪಿಯನ್ನು ಮೊಳಕಾಲ್ಮೂರು ಪೊಲೀಸರು ಬಂಧಿಸಿದ್ದಾರೆ. 2004ರಲ್ಲಿ ಬಸ್‌ನಲ್ಲಿ ದರೋಡೆ ನಡೆಸಿ ಪರಾರಿಯಾಗಿದ್ದ ಆರೋಪಿ ಭಾಸ್ಕರ್ ಅಲಿಯಾಸ್ ಯರ್ರಿಸ್ವಾಮಿಯನ್ನು ಆಂಧ್ರಪ್ರದೇಶದ ತಿರುಪತಿ ಸಮೀಪದ ಪದ್ಮನಗರದಲ್ಲಿ ಪತ್ತೆ ಹಚ್ಚಿ ಬಂಧಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ತುಮಕೂರ್ಲಹಳ್ಳಿ ಗ್ರಾಮದ ಸಮೀಪ ಬಸ್ ದರೋಡೆ ನಡೆದಿತ್ತು. ಪ್ರಕರಣ ದಾಖಲಾದ ಬಳಿಕ ಆರೋಪಿ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ. ಸುದೀರ್ಘ 22 ವರ್ಷಗಳ ಬಳಿಕ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಮೊಳಕಾಲ್ಮೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಪಿಎಸ್ಐ ಮಹೇಶ್ ಹೊಸಪೇಟೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಸಫಲವಾಗಿದೆ. ಹಲವು ವರ್ಷಗಳಿಂದ ಪೊಲೀಸರಿಗೆ ಸಿಗದೇ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿರುವ ಮೊಳಕಾಲ್ಮೂರು ಪೊಲೀಸರ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ದೀರ್ಘಕಾಲದಿಂದ ಬಾಕಿ ಉಳಿದಿದ್ದ ಪ್ರಕರಣದ ಆರೋಪಿಯ ಬಂಧನದಿಂದ ಪೊಲೀಸ್ ಇಲಾಖೆಯ ಕಾರ್ಯಾಚರಣೆಗೆ ಮಹತ್ವದ ಯಶಸ್ಸು ದೊರೆತಿದೆ.

Edited By : Somashekar
PublicNext

PublicNext

25/10/2026 06:08 pm

Cinque Terre

7.99 K

Cinque Terre

0

ಸಂಬಂಧಿತ ಸುದ್ದಿ