ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಮಲಾವತಿ ನದಿಯಲ್ಲಿ ಮೀನುಗಳ ಮಾರಣಹೋಮ: ಸೀಮೆಂಟ್ ಕಾರ್ಖಾನೆ ವಿರುದ್ಧ ಸ್ಥಳೀಯರ ಆಕ್ರೋಶ

ಕಲಬುರಗಿ:ನದಿಯಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿರುವ ದೃಶ್ಯ ಸೇಡಂ ಪಟ್ಟಣದ ಹೊರವಲಯದಲ್ಲಿ ಆತಂಕ ಮೂಡಿಸಿದೆ. ಕಮಲಾವತಿ ನದಿಯಲ್ಲಿ ಮೀನುಗಳ ಸಾಮೂಹಿಕ ಸಾವು ಸಂಭವಿಸಿದ್ದು, ಸಿಮೆಂಟ್ ಕಾರ್ಖಾನೆಯಿಂದ ಹರಿದು ಬರುವ ವಿಷಪೂರಿತ ನೀರೇ ಇದಕ್ಕೆ ಕಾರಣ ಎಂಬ ಆರೋಪ ಕೇಳಿ ಬಂದಿದೆ.

ಸೇಡಂ ಜನರ ಜೀವನಾಡಿಯಾಗಿರುವ ನದಿಯಲ್ಲೇ ಇಂತಹ ಘಟನೆ ನಡೆದಿರುವುದು ಸ್ಥಳೀಯರ ಕಳವಳಕ್ಕೆ ಕಾರಣವಾಗಿದೆ. ಕಾರ್ಖಾನೆಯ ತ್ಯಾಜ್ಯ ನೀರು ನದಿಗೆ ಸೇರುತ್ತಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿರುವ ಜನರು, ನದಿ ನೀರಿನ ಗುಣಮಟ್ಟದ ಕುರಿತು ಸಮಗ್ರ ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ.

ನದಿಯ ನೀರನ್ನು ಪ್ರಾಣಿ-ಪಕ್ಷಿಗಳು ಹಾಗೂ ದನಕರುಗಳು ಕುಡಿಯುತ್ತವೆ. ನೀರು ಕಲುಷಿತಗೊಂಡಿದ್ದರೆ ಅವುಗಳ ಜೀವಕ್ಕೂ ಅಪಾಯ ಎದುರಾಗಬಹುದು. ಇಂತಹ ಪರಿಸ್ಥಿತಿಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಹೊಣೆ ಯಾರು ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ಮೀನುಗಳ ಸಾವಿಗೆ ನಿಜವಾದ ಕಾರಣವೇನು? ನದಿಗೆ ಕೈಗಾರಿಕಾ ತ್ಯಾಜ್ಯ ಸೇರುತ್ತಿದೆಯೇ? ಎಂಬ ಪ್ರಶ್ನೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಉತ್ತರ ಕಂಡುಕೊಳ್ಳಬೇಕಿದೆ. ತಕ್ಷಣ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಬೇಕು ಹಾಗೂ ತಪ್ಪಿತಸ್ಥರು ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Edited By :
Kshetra Samachara

Kshetra Samachara

25/10/2026 09:23 pm

Cinque Terre

280

Cinque Terre

0

ಸಂಬಂಧಿತ ಸುದ್ದಿ