ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪರಿಸರ ಸಂರಕ್ಷಣೆ, ಯುವಜನರಲ್ಲಿ ಜಾಗೃತಿಗೆ ಸಂಡೂರಿನಿಂದ ಅಯೋಧ್ಯೆಗೆ ಮಹಾಪಾದಯಾತ್ರೆ

ಕೊಪ್ಪಳ: ಪರಿಸರ ಸಂರಕ್ಷಣೆಯ ಮಹತ್ವ ಸಾರುವುದರ ಜತೆಗೆ, ಯುವಜನರನ್ನು ಮಾದಕ ವಸ್ತುಗಳ ವ್ಯಸನದಿಂದ ದೂರವಿರಿಸಿ ಸನ್ಮಾರ್ಗದತ್ತ ಕೊಂಡೊಯ್ಯುವ ಉದ್ದೇಶದಿಂದ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಯಶವಂತನಗರದ ವೆಂಕಟೇಶ ಅವರು ಅಂಜನಾದ್ರಿಯಿಂದ ಅಯೋಧ್ಯೆಯ ಶ್ರೀರಾಮ ಮಂದಿರದವರೆಗೆ ಮಹಾಪಾದಯಾತ್ರೆ ಕೈಗೊಂಡಿದ್ದಾರೆ.

ಪಾದಯಾತ್ರೆಯ ಮಾರ್ಗಮಧ್ಯೆ ಐತಿಹಾಸಿಕ ಕನಕಗಿರಿಗೆ ಆಗಮಿಸಿದ ಅವರು, ಪಟ್ಟಣದ ಶ್ರೀ ಕನಕಾಚಲಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಸ್ಥಳೀಯರು ಯಾತ್ರಿಕರನ್ನು ಆತ್ಮೀಯವಾಗಿ ಸ್ವಾಗತಿಸಿ, ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪರಿಸರ ರಕ್ಷಣೆ, ವ್ಯಸನಮುಕ್ತ ಸಮಾಜದ ಸಂಕಲ್ಪ ಹಾಗೂ ಪ್ರಕೃತಿ ನಾಶದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಪಾದಯಾತ್ರೆಯ ಪ್ರಮುಖ ಉದ್ದೇಶಗಳಾಗಿವೆ. ಯುವಜನರು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು. ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಸಂದೇಶವನ್ನು ಜನರಿಗೆ ತಲುಪಿಸುವ ಪ್ರಯತ್ನವನ್ನು ಯಾತ್ರಿಕರು ಮಾಡುತ್ತಿದ್ದಾರೆ.

ಸಮಾಜದಲ್ಲಿನ ವಿವಿಧ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವುದರ ಜತೆಗೆ, ತಮ್ಮ ಸಂಕಲ್ಪವನ್ನು ಪ್ರಭು ಶ್ರೀರಾಮನ ಚರಣಗಳಲ್ಲಿ ಸಮರ್ಪಿಸುವ ಉದ್ದೇಶದಿಂದ ಈ ಪಾದಯಾತ್ರೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

Edited By :
Kshetra Samachara

Kshetra Samachara

26/10/2026 07:35 am

Cinque Terre

1.96 K

Cinque Terre

0

ಸಂಬಂಧಿತ ಸುದ್ದಿ