ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ!

ರಾಮನಗರ : ಮಾಗಡಿ ತಾಲೂಕಿನಲ್ಲಿ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ, ಜನರು ಹೊರಗೆ ಬರಲು ಭಯಪಡುತ್ತಿದ್ದರು. ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಮಾಗಡಿ ತಾಲೂಕಿನ ತಗ್ಗೀಕುಪ್ಪೆ ಗ್ರಾಮದಲ್ಲಿ ಚಿರತೆಯನ್ನು ಸೆರೆಹಿಡಿಯಲಾಗಿದೆ. ಗ್ರಾಮದ ಹೊರವಲಯದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.

ಜಾನುವಾರುಗಳ ಮೇಲೆ ದಾಳಿ ನಡೆಸಿದ್ದ ಚಿರತೆ ಗ್ರಾಮದಲ್ಲಿ ಆತಂಕ ಸೃಷ್ಟಿಸಿತ್ತು. ಈ ಕುರಿತು ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಬೋನು ಅಳವಡಿಸಿತ್ತು.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.

ಮಾಗಡಿ ಭಾಗದಲ್ಲಿ ಇನ್ನಷ್ಟು ಚಿರತೆಗಳಿದ್ದು, ಅವುಗಳನ್ನೂ ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Edited By :
PublicNext

PublicNext

26/10/2026 07:52 am

Cinque Terre

7.22 K

Cinque Terre

0