ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ರಸ್ತೆ ದಾಟುತ್ತಿದ್ದ ಜಿಂಕೆಗೆ ವಾಹನ ಡಿಕ್ಕಿ, ಗಂಭೀರ ಗಾಯ

ಚಾಮರಾಜನಗರ : ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಗಂಭೀರವಾಗಿ ಗಾಯಗೊಂಡಿದೆ.

ನಂಜನಗೂಡು ತಾಲೂಕಿನ ವೀರದೇವನಪುರ ಮತ್ತು ಬದನವಾಳು ಗ್ರಾಮಗಳ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆಯ ತೊಡೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ನರಳಾಡುತ್ತಿದೆ. ಜಿಂಕೆಗೆ ಡಿಕ್ಕಿ ಹೊಡೆದ ವಾಹನದ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದು, ಗಾಯಗೊಂಡ ಜಿಂಕೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪದೇಪದೇ ಈ ರಸ್ತೆಯಲ್ಲಿ ಜಿಂಕೆಗಳು ವಾಹನಗಳಿಗೆ ಸಿಲುಕಿ ಸಾವನ್ನಪ್ಪುತ್ತಿವೆ. ಬದನವಾಳು ಹಾಗೂ ನೇರಳೆ ಗೇಟ್ ಸುತ್ತಮುತ್ತ ಜಿಂಕೆಗಳು ಹೆಚ್ಚಾಗಿ ಓಡಾಡುತ್ತಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಅಗತ್ಯವಿದೆ.

ಈ ಭಾಗದಲ್ಲಿ ಜಿಂಕೆಗಳ ಸಂಚಾರದ ಬಗ್ಗೆ ವಾಹನ ಸವಾರರಿಗೆ ಎಚ್ಚರಿಕೆ ನೀಡುವ ನಾಮಫಲಕಗಳನ್ನು ಅಳವಡಿಸಬೇಕು. ಅಲ್ಲದೆ, ವಾಹನಗಳ ವೇಗ ನಿಯಂತ್ರಣಕ್ಕೆ ಸ್ಪೀಡ್ ಬ್ರೇಕರ್‌ಗಳನ್ನು ನಿರ್ಮಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Edited By :
PublicNext

PublicNext

26/10/2026 08:05 am

Cinque Terre

4.89 K

Cinque Terre

0

ಸಂಬಂಧಿತ ಸುದ್ದಿ