ರಾಮನಗರ : ಕಗ್ಗಲೀಪುರ ಬೈಪಾಸ್ ನಿರ್ಮಾಣಕ್ಕೆ ಒತ್ತಾಯಿಸಿ ರೈತರು ನಿನ್ನೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಭಿಕ್ಷಾಟನೆ ಮಾಡುವ ಮೂಲಕ ಹಣ ಸಂಗ್ರಹಿಸಿ, ಅದನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ನೀಡಲು ಪ್ರಯತ್ನಿಸುವುದಾಗಿ ಹೇಳಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಬೆಳಿಗ್ಗೆಯಿಂದ ಸಂಜೆವರೆಗೆ ರೈತರು ಭಿಕ್ಷಾಟನೆ ಮಾಡಿದರು. ಬಿಎಂಟಿಸಿ, ತರಕಾರಿ ಮಾರುಕಟ್ಟೆ ಹಾಗೂ ಬಟ್ಟೆ ಅಂಗಡಿಗಳಲ್ಲಿಯೂ ಭಿಕ್ಷೆ ಬೇಡುತ್ತಿರುವ ದೃಶ್ಯಗಳು ಕಂಡುಬಂದವು.
ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿದ್ದರೂ, ಕ್ಷೇತ್ರದ ಜನಪ್ರತಿನಿಧಿಗಳು ಹಾಗೂ ಸಂಸದರು ಈ ಬಗ್ಗೆ ಗಮನಹರಿಸುತ್ತಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ, ಭಿಕ್ಷುಕರ ವೇಷ ಧರಿಸಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ರೈತರು ಪ್ರಯತ್ನಿಸಿದ್ದಾರೆ.
PublicNext
26/10/2026 08:07 am
LOADING...