ಮೈಸೂರು : ಇ-ಸ್ವತ್ತು ಮಾಡಿಕೊಡಲು ಲಂಚದ ಬೇಡಿಕೆ ಇಟ್ಟಿರುವ ಗಂಭೀರ ಆರೋಪ ಸಾಂಸ್ಕೃತಿಕ ನಗರಿಯಲ್ಲಿ ಕೇಳಿಬಂದಿದೆ.
ತಿ. ನರಸೀಪುರ ತಾಲೂಕಿನ ಕೊತ್ತೇಗಾಲ ಗ್ರಾಮ ಪಂಚಾಯಿತಿಯ ಪಿಡಿಒ ಶ್ರೀನಿವಾಸ್ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ-ಸ್ವತ್ತು ಮಾಡಿಕೊಡಲು 10 ಸಾವಿರ ರೂಪಾಯಿ ಲಂಚ ಕೇಳುತ್ತಾರೆ. ಪಂಚಾಯಿತಿಯ ಪ್ರತಿಯೊಂದು ಕೆಲಸ ಮಾಡಿಕೊಡಲು ಹಣ ಕೇಳುತ್ತಾರೆ. ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಬಿಲ್ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
PublicNext
26/10/2026 01:29 pm
LOADING...