ಚಿಕ್ಕಬಳ್ಳಾಪುರ: ಬಿಜೆಪಿ ವಿರುದ್ಧ ಕಿಡಿಕಾರಿದ ಶಾಸಕ ಪ್ರದೀಪ್ ಈಶ್ವರ್, ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2029ಕ್ಕೆ ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ ಎಂದರು.
ಚಿಕ್ಕಬಳ್ಳಾಪುರದಲ್ಲಿ ಮತದಾರರಿಗೆ ಹಣ ಹಂಚಿಕೆ ವಿಚಾರ ಖಂಡನೀಯ. ಅದನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಎಫ್‌ಐಆರ್ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಬಿಜೆಪಿಯವರು ಭ್ರಷ್ಟರು ಎನ್ನುವುದು ಪದೇ ಪದೇ ಸಾಬೀತಾಗುತ್ತಿದೆ.
ಕಾಂಗ್ರೆಸ್‌ನವರು ಗ್ಯಾರಂಟಿಗಳನ್ನು ಇಟ್ಟುಕೊಂಡು ಮತ ಕೇಳಿದ್ದೇವೆ. ದುಡ್ಡು ಗೆಲ್ಲುತ್ತೋ, ಪ್ರಾಮಾಣಿಕತೆ ಗೆಲ್ಲುತ್ತೋ ಕಾದು ನೋಡಬೇಕಾಗಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.
PublicNext
26/10/2026 02:59 pm
LOADING...