ಚಾಮರಾಜನಗರ: ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ವಿಜೃಂಭಣೆಯಿಂದ ನಡೆದ ಅಂತರಾಷ್ಟ್ರೀಯ ಬೌದ್ಧ ಸಮ್ಮೇಳನವು ನಿನ್ನೆ ಸಂಜೆ ಯಶಸ್ವಿ ಸಮಾರೋಪ ಸಮಾರಂಭದೊಂದಿಗೆ ಮುಕ್ತಾಯಗೊಂಡಿತು.
ಸಮಾರೋಪ ಸಮಾರಂಭದ ನೇತೃತ್ವ ವಹಿಸಿದ್ದ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ತಮ್ಮ ವಿಶಿಷ್ಟ ನಡೆಯ ಮೂಲಕ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕರ ನಿರಂತರ ಒತ್ತಾಯದ ಮೇರೆಗೆ ಶಾಸಕರು ಬೌದ್ಧ ಅಭಿಮಾನಿಗಳು ಹಾಗೂ ಯುವಕರೊಂದಿಗೆ ವೇದಿಕೆಯ ಮೇಲೆ ಹೆಜ್ಜೆ ಹಾಕಿ ಸಂಭ್ರಮಿಸಿದರು.
ಶಾಸಕರ ಈ ಉತ್ಸಾಹಭರಿತ ನೃತ್ಯವು ಸಮ್ಮೇಳನದ ಸಮಾರೋಪ ಸಮಾರಂಭಕ್ಕೆ ಮತ್ತಷ್ಟು ಮೆರುಗು ನೀಡಿತು. ಅವರ ಈ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.
PublicNext
26/10/2026 03:43 pm
LOADING...