ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಆಗಿದ್ದ ಪೂರ್ಣಾ ಪಾಟೀಲ ಅವರು ವಿಧಿವಶರಾಗಿದ್ದಾರೆ.ಮೂರು ಬಾರಿ ಮಹಾನಗರ ಪಾಲಿಕೆಯ ಸದಸ್ಯರಾಗಿ, ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾಗಿ ಹಾಗೂ ಭಾರತೀಯ ಜನತಾ ಪಕ್ಷದ ವಿವಿಧ ಹುದ್ದೆಗಳನ್ನು ಅವರು ಅಲಂಕರಿಸಿದ್ದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಕೊನೆಯುಸಿರೆಳೆದಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಧಾರವಾಡದ ನಾರಾಯಣಪುರದಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
Kshetra Samachara
26/10/2026 05:51 pm
LOADING...