ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸಪೇಟೆ : ಅಂಜನಾದ್ರಿಯಲ್ಲಿ ವಿಶೇಷ ಪೂಜೆ; ಕಲ್ಲಿನ ರಥ, ಸಪ್ತಸ್ವರ ಮಂಟಪಗಳ ವೈಭವಕ್ಕೆ ಮೆಚ್ಚುಗೆ

ಹೊಸಪೇಟೆ : ವಿಶ್ವವಿಖ್ಯಾತ ಹಂಪಿಯ ಐತಿಹಾಸಿಕ ಸ್ಮಾರಕಗಳಿಗೆ ಯುನೆಸ್ಕೋ ತಂಡ ಭೇಟಿ ನೀಡಿ, ವಿಜಯನಗರ ಸಾಮ್ರಾಜ್ಯದ ಕಲೆ, ವಾಸ್ತುಶಿಲ್ಪ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ವೀಕ್ಷಿಸಿತು.

ಯುನೆಸ್ಕೋ ತಂಡವು ಮೊದಲು ಅಂಜನಾದ್ರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿತು. ಬಳಿಕ ಪ್ರಸಿದ್ಧ ಕಲ್ಲಿನ ರಥ ಹಾಗೂ ಸಪ್ತಸ್ವರ ಮಂಟಪಗಳಿಗೆ ಭೇಟಿ ನೀಡಿ, ಅಲ್ಲಿನ ಶಿಲ್ಪಕಲೆ ಮತ್ತು ಸಂಗೀತ ಪರಂಪರೆಯ ಕುರಿತು ಮಾಹಿತಿ ಪಡೆದುಕೊಂಡಿತು.

ಪ್ರವಾಸಿ ಮಾರ್ಗದರ್ಶಿಗಳು ವಿಜಯನಗರ ಸಾಮ್ರಾಜ್ಯದ ಇತಿಹಾಸ, ಸ್ಮಾರಕಗಳ ವೈಶಿಷ್ಟ್ಯ ಹಾಗೂ ಅವುಗಳ ಐತಿಹಾಸಿಕ ಮಹತ್ವವನ್ನು ತಂಡಕ್ಕೆ ವಿವರಿಸಿದರು. ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೇರಿದಂತೆ ಹಿರಿಯ ಅಧಿಕಾರಿಗಳು ತಂಡದ ಭೇಟಿಯ ಸಂದರ್ಭದಲ್ಲಿ ಉಪಸ್ಥಿತರಿದ್ದು, ಅಗತ್ಯ ಮಾಹಿತಿ ಒದಗಿಸಿದರು.

Edited By :
PublicNext

PublicNext

26/10/2026 06:26 pm

Cinque Terre

6.92 K

Cinque Terre

0

ಸಂಬಂಧಿತ ಸುದ್ದಿ