ಚಿತ್ರದುರ್ಗ: ನಾಡಿನಾದ್ಯಂತ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಂಭ್ರಮ ಮನೆಮಾಡಿದೆ. ಇದರ ನಡುವೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಕಪ್ಪು ವಸ್ತ್ರ ಧರಿಸಿ ಭಾಗವಹಿಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪರಿಶಿಷ್ಟ ಪಂಗಡದ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿಯನ್ನು ಶೇಕಡಾ 7ರಿಂದ ಶೇಕಡಾ 3ಕ್ಕೆ ಇಳಿಸಿರುವುದನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ಮುಖಂಡರು ಕಪ್ಪು ವಸ್ತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ನಡೆಯುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ರಾಜಕೀಯ ಬಿಸಿ ಜೋರಾಗಿದೆ.
ಒಂದೆಡೆ ಮಹರ್ಷಿ ವಾಲ್ಮೀಕಿಯವರ ಜಯಂತಿ ಆಚರಣೆ ನಡೆಯುತ್ತಿದ್ದರೆ, ಮತ್ತೊಂದೆಡೆ ಪರಿಶಿಷ್ಟ ಪಂಗಡದ ಮೀಸಲಾತಿ ವಿಚಾರವಾಗಿ ಬಿಜೆಪಿ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಟಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಮುಖಂಡರು ಕಪ್ಪು ವಸ್ತ್ರ ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಮೀಸಲಾತಿ ಇಳಿಕೆ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಶೇಕಡಾ 7ರಷ್ಟಿದ್ದ ಮೀಸಲಾತಿಯನ್ನು ಶೇಕಡಾ 3ಕ್ಕೆ ಇಳಿಸಿರುವುದಕ್ಕೆ ಬಿಜೆಪಿ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಅಲ್ಲದೆ, ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಸಮರ್ಪಕವಾಗಿ ವಾದ ಮಂಡಿಸಿಲ್ಲ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.
ಪರಿಶಿಷ್ಟ ಪಂಗಡದ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಬೇಕು ಹಾಗೂ ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಬಿಜೆಪಿ ಮುಖಂಡರ ಪ್ರಮುಖ ಆಗ್ರಹವಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಬಾಳೇಮಂಡಿ ರಾಮದಾಸ್, ಪಾಲಯ್ಯ, ಜಯಪಾಲಯ್ಯ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
PublicNext
26/10/2026 08:52 pm