ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರದಲ್ಲಿ ವಿಜೃಂಭಣೆಯ ಮಹರ್ಷಿ ವಾಲ್ಮೀಕಿ ಜಯಂತಿ: ವರ್ಣರಂಜಿತ ಮೆರವಣಿಗೆ

ಚಾಮರಾಜನಗರ: ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಜಯಂತಿಯ ಅಂಗವಾಗಿ ನಗರದ ರಾಜಬೀದಿಗಳಲ್ಲಿ ವಿವಿಧ ಕಲಾತಂಡಗಳ ವೈವಿಧ್ಯಮಯ ಪ್ರದರ್ಶನಗಳೊಂದಿಗೆ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ತೆರೆದ ವಾಹನದಲ್ಲಿದ್ದ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಮೆರವಣಿಗೆಯು ನಗರದ ಅಂಗಡಿ ಬೀದಿ ಹಾಗೂ ಡಿ.ವಿ.ಎಸ್. ರಸ್ತೆಯ ಮೂಲಕ ಸಾಗಿತು. ವಿವಿಧ ಕಲಾತಂಡಗಳ ಪ್ರದರ್ಶನ ಮೆರವಣಿಗೆಯ ಆಕರ್ಷಣೆಯಾಗಿದ್ದು, ಸಾರ್ವಜನಿಕರ ಗಮನ ಸೆಳೆಯಿತು.

ಬಳಿಕ ನಗರದ ಪ್ರಸಿದ್ಧ ಮಾರಿಗುಡಿ ಮೈದಾನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಸಭಾ ಕಾರ್ಯಕ್ರಮವನ್ನು ವೈಭವದಿಂದ ಆಯೋಜಿಸಲಾಗಿತ್ತು.

Edited By :
PublicNext

PublicNext

27/10/2026 12:12 pm

Cinque Terre

5.84 K

Cinque Terre

0

ಸಂಬಂಧಿತ ಸುದ್ದಿ