ಮಡಿಕೇರಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯ ಚೌಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಖರ್ಗೆ ಅವರ ಬಂಧನ ಹಾಗೂ ರಾಜೀನಾಮೆಗೆ ಒತ್ತಾಯಿಸಲಾಯಿತು. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಬಿಜೆಪಿ ಪ್ರಮುಖರಾದ ಮಹೇಶ್ ಜೈನಿ, ರವಿಕುಶಾಲಪ್ಪ, ಸುನಿಲ್ ಸುಬ್ರಮಣಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
PublicNext
27/10/2026 12:55 pm
LOADING...