ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿಯಲ್ಲಿ ನಕಲಿ ಮತದಾನದ ಆರೋಪ: ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ!

ಹಾವೇರಿ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸೋಮವಾರ ಹಾವೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರ ರಾಜೀನಾಮೆಗೆ ಆಗ್ರಹಿಸಿ, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ತಳ್ಳಿ ಕಾರ್ಯಕರ್ತರು ಮುನ್ನಡೆಯಲು ಪ್ರಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಉಂಟಾದ ನೂಕಾಟದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಅಕ್ಟೋಬರ್ 23ರಂದು ನಡೆದ ಮತದಾನದ ವೇಳೆ ಹಾವೇರಿ ನಗರದ 85ನೇ ಮತಗಟ್ಟೆಯಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಅವರ ಪತ್ನಿಯ ಹೆಸರಿನಲ್ಲಿ, ಮತದಾನದ ಹಕ್ಕು ಹೊಂದಿರದ ಶಿಲ್ಪಾ ಬಡೆಮ್ಮನವರ ಎಂಬ ಮಹಿಳೆ ಮತ ಚಲಾಯಿಸಿದ್ದಾರೆ ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು. ಆರೋಪಿತರು ಮತ್ತು ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಜೊತೆಗೆ, ನೈತಿಕ ಹೊಣೆ ಹೊತ್ತು ಸಚಿವ ರುದ್ರಪ್ಪ ಲಮಾಣಿ ರಾಜೀನಾಮೆ ನೀಡಬೇಕು ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಅವರನ್ನು ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ವರದಿ: ಲೋಕೇಶ್ ಸುಣಗಾರ್, PublicNext

Edited By :
PublicNext

PublicNext

27/10/2026 01:25 pm

Cinque Terre

5.68 K

Cinque Terre

0

ಸಂಬಂಧಿತ ಸುದ್ದಿ