ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಶಾಸಕ ವೀರೇಂದ್ರ ಪಪ್ಪಿ ದಿಢೀರ್ ಭೇಟಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ನಗರ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಸೌಕರ್ಯಗಳ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಆಡಳಿತ ವಿಭಾಗ, ಆಸ್ಪತ್ರೆಯ ಅಡುಗೆ ಕೋಣೆ, ವಾರ್ಡ್‌ಗಳು ಸೇರಿದಂತೆ ಆಸ್ಪತ್ರೆಯ ವಿವಿಧ ವಿಭಾಗಗಳ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ RMO ಡಾ. ಪಾರ್ವತಿ ವೈದ್ಯಾಧಿಕಾರಿಗಳ ವಿರುದ್ಧ ನೀಡಿದ್ದ ದೂರು ಕುರಿತಂತೆ ಪರಿಶೀಲನೆ ನಡೆಸಿದರು. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಜಿಲ್ಲಾ ಸರ್ಜನ್ ಡಾ. ರವೀಂದ್ರ, ಸಮಸ್ಯೆ ಕುರಿತಂತೆ ಶಾಸಕರ ಗಮನಕ್ಕೆ ತಂದಿದ್ದೇನೆ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಾಸಕ ಪಪ್ಪಿ, ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು.

Edited By :
PublicNext

PublicNext

27/10/2026 01:30 pm

Cinque Terre

4.87 K

Cinque Terre

0

ಸಂಬಂಧಿತ ಸುದ್ದಿ