ಬೆಳಗಾವಿ: 10ನೇ ತರಗತಿಯ ಕನ್ನಡ ಮತ್ತು ಆಂಗ್ಲ ಮಾಧ್ಯಮದ ಹಾಗೂ ರಾಜ್ಯ ಪಠ್ಯಕ್ರಮ ಮತ್ತು ಸಿಬಿಎಸ್‌ಇ ಪಠ್ಯಕ್ರಮದ ವಿದ್ಯಾರ್ಥಿಗಳಿಗಾಗಿ ಬೆಳಗಾವಿಯ ನಾಗನೂರಿನ ಶ್ರೀ ಪ್ರಭುದೇವ ವಿಜ್ಞಾನ ಪಿಯು ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಗಳ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.
10ನೇ ತರಗತಿಯ ವಿಜ್ಞಾನ ಪಠ್ಯಕ್ರಮಕ್ಕೆ ಸಂಬಂಧಿಸಿದ ವಿವಿಧ ಪ್ರಯೋಗಗಳನ್ನು ಈ ಪ್ರದರ್ಶನದಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ತೋರಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ವಿಜ್ಞಾನ ವಿಷಯವನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಹಾಗೂ ಪಠ್ಯಕ್ರಮದಲ್ಲಿರುವ ಪ್ರಯೋಗಗಳ ಕುರಿತು ಪ್ರಾಯೋಗಿಕ ಜ್ಞಾನ ಪಡೆಯಲು ಅನುಕೂಲವಾಗಲಿದೆ.
ಈ ಕಾರ್ಯಕ್ರಮದ ಮಾಹಿತಿಯನ್ನು ಎಲ್ಲ ಶಾಲೆಗಳ 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ವಿಜ್ಞಾನ ಶಿಕ್ಷಕರಿಗೆ ತಲುಪಿಸುವ ಉದ್ದೇಶದಿಂದ ಕಾಲೇಜಿನ ಸಿಬ್ಬಂದಿ ತಮ್ಮ ಸ್ನೇಹಿತರು ಮತ್ತು ಪರಿಚಿತರಿಗೆ ಕಾರ್ಯಕ್ರಮದ ಕರಪತ್ರವನ್ನು ಹಂಚಿಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಈ ವಿಜ್ಞಾನ ಪ್ರಯೋಗಗಳ ಪ್ರದರ್ಶನದ ಪ್ರಯೋಜನ ಪಡೆದುಕೊಳ್ಳಲು ಸಹಕರಿಸುವಂತೆ ಮನವಿ ಮಾಡಲಾಗಿದೆ.
Kshetra Samachara
27/10/2026 01:34 pm
LOADING...