ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಏಕಾಏಕಿ ಹಿಮ್ಮುಖವಾಗಿ ಚಲಿಸಿದ ಬಸ್ ಡಿಪೋ ಗೇಟ್‌ಗೆ ಡಿಕ್ಕಿ...

ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಂದ ತುಂಬಿದ್ದ ಬಸ್ ಏಕಾಏಕಿ ಹಿಮ್ಮುಖವಾಗಿ ಚಲಿಸಿ ಡಿಪೋ ಗೇಟ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಬಸ್‌ನ ಚಾಲಕ ಬಸ್‌ನಿಂದ ಇಳಿದು ಹೊರಗೆ ಹೋಗಿದ್ದರು. ಇತ್ತ, ನಿರ್ವಾಹಕರು ಬಸ್‌ನ ಡ್ಯೂಟಿ ಎಂಟ್ರಿ ಮಾಡಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಚಾಲಕನ ಬಾಗಿಲಿನ ಮೂಲಕ ಬಸ್ ಹತ್ತಿದ ಮಹಿಳಾ ಪ್ರಯಾಣಿಕರೊಬ್ಬರು ಆಕಸ್ಮಿಕವಾಗಿ ಕ್ಲಚ್ ಮೇಲೆ ಕಾಲಿಟ್ಟಿದ್ದರಿಂದ ಬಸ್ ಹಿಮ್ಮುಖವಾಗಿ ಚಲಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಸ್ ಹಿಂದಕ್ಕೆ ಚಲಿಸುತ್ತಿರುವುದನ್ನು ಗಮನಿಸಿದ ಪ್ರಯಾಣಿಕರು ಹಾಗೂ ಸುತ್ತಮುತ್ತಲಿದ್ದ ಜನರು ಗಾಬರಿಗೊಂಡು ತಕ್ಷಣವೇ ದೂರ ಸರಿದಿದ್ದಾರೆ.

ಹಿಮ್ಮುಖವಾಗಿ ಚಲಿಸಿದ ಬಸ್ ಕೊನೆಗೆ ಬಸ್ ನಿಲ್ದಾಣದ ಸಮೀಪದಲ್ಲಿದ್ದ ಡಿಪೋ ಗೇಟ್‌ಗೆ ಡಿಕ್ಕಿ ಹೊಡೆದು ನಿಂತಿದೆ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಕೆಲಕಾಲ ಆತಂಕಕ್ಕೊಳಗಾಗಿದ್ದಾರೆ.

ಬಸ್ ಹಿಮ್ಮುಖವಾಗಿ ಚಲಿಸಿದ ಸಂದರ್ಭದಲ್ಲಿ ಪ್ರಯಾಣಿಕರು ಸಮಯಪ್ರಜ್ಞೆಯಿಂದ ದೂರ ಸರಿದಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

Edited By :
PublicNext

PublicNext

27/10/2026 05:08 pm

Cinque Terre

9.41 K

Cinque Terre

0

ಸಂಬಂಧಿತ ಸುದ್ದಿ