ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್: ಪಟಾಕಿ ಹಚ್ಚಿದ್ದಕ್ಕೆ ಕಪಾಳಮೋಕ್ಷ!

ಬೀದರ್: ಮನೆಯ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಎರಡು ಕುಟುಂಬಗಳ ಮಧ್ಯೆ ಜಗಳ ಆರಂಭವಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಇದೇ ಜಗಳದಲ್ಲಿ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ. ಲಕ್ಷ್ಮೀಬಾಯಿ ಮಡಿವಾಳ ಎಂಬ ಮಹಿಳೆಗೆ ಸುಭಾಷ್ ಮೂಲಗೆ ಎಂಬುವವರು ಕಪಾಳಮೋಕ್ಷ ಮಾಡಿದ್ದಾರೆ. ಕಪಾಳಮೋಕ್ಷ ಮಾಡಿರುವ ಎಕ್ಸ್‌ಕ್ಲೂಸಿವ್ ವಿಡಿಯೋ ಲಭ್ಯವಾಗಿದೆ.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಟ್ನಾಳ ಗ್ರಾಮದಲ್ಲಿ ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿದೆ.

Edited By : Vinayak Patil
PublicNext

PublicNext

27/10/2026 05:40 pm

Cinque Terre

7.51 K

Cinque Terre

0