ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್: ರೈತರ ಸುರಕ್ಷತೆಗಾಗಿ ವಿದ್ಯುತ್ ಪೂರೈಕೆ ಸಮಯ ಬದಲಿಸಿ : ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಆಗ್ರಹ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ರೈತರ ಹಿತ ಮತ್ತು ಜೀವದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಜಮೀನುಗಳಿಗೆ ಪೂರೈಸಲಾಗುತ್ತಿರುವ ವಿದ್ಯುತ್ ಸಮಯವನ್ನು ಬದಲಾಯಿಸಬೇಕು ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ರಾಜ್ಯ ಸರ್ಕಾರ ಮತ್ತು ವಿದ್ಯುತ್ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಪ್ರಸ್ತುತ ರೈತರ ಜಮೀನುಗಳಿಗೆ ನಸುಕಿನ ಜಾವ 3 ಗಂಟೆಯಿಂದ ಬೆಳಿಗ್ಗೆ 10 ಗಂಟೆಯವರೆಗೆ ಒಟ್ಟು 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಈ ವೇಳಾಪಟ್ಟಿಯಿಂದಾಗಿ ರೈತರು ನೀರು ಹಾಯಿಸಲು ಕತ್ತಲಿನಲ್ಲೇ ಮನೆಯಿಂದ ಹೊರಡಬೇಕಾಗಿದೆ.

ಈ ವೇಳಾಪಟ್ಟಿಯನ್ನು ಬದಲಾಯಿಸಿ, ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಿರಂತರವಾಗಿ 7 ಗಂಟೆಗಳ ಕಾಲ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ.

ನಸುಕಿನ ಜಾವದಲ್ಲಿ ಜಮೀನುಗಳಿಗೆ ತೆರಳುವಾಗ ಹಾವು, ಚೇಳು ಸೇರಿದಂತೆ ವಿಷಕಾರಿ ಜೀವಿಗಳು ಮತ್ತು ಕಾಡುಪ್ರಾಣಿಗಳಿಂದ ಅಪಾಯ ಎದುರಾಗುವ ಭೀತಿ ಇರುತ್ತದೆ. ಕತ್ತಲಿನಲ್ಲಿ ಕೃಷಿ ಕೆಲಸ ನಿರ್ವಹಿಸುವುದು ಸುರಕ್ಷತೆಯ ದೃಷ್ಟಿಯಿಂದಲೂ ಸವಾಲಾಗಿದೆ ಎಂದು ಶಾಸಕರು ಹೇಳಿದ್ದಾರೆ.

ಬೆಳಗಿನ ಬೆಳಕಿನಲ್ಲಿ ಜಮೀನುಗಳಿಗೆ ತೆರಳಿದರೆ ನೀರಾವರಿ ಕಾರ್ಯಗಳನ್ನು ಸುಗಮವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಇದರಿಂದ ರಾತ್ರಿ ಮತ್ತು ಕತ್ತಲಿನಲ್ಲಿ ಜಮೀನುಗಳಿಗೆ ತೆರಳುವ ಅನಿವಾರ್ಯತೆ ಕಡಿಮೆಯಾಗಿ ರೈತರ ಸುರಕ್ಷತೆಗೆ ಅನುಕೂಲವಾಗಲಿದೆ.

ಕೃಷಿಯೇ ರೈತರ ಜೀವನಾಧಾರವಾಗಿದ್ದು, ರೈತರ ಶ್ರಮ, ಸಮಯ ಮತ್ತು ಸುರಕ್ಷತೆಯನ್ನು ಪರಿಗಣಿಸಿ ವಿದ್ಯುತ್ ಪೂರೈಕೆ ವ್ಯವಸ್ಥೆಯನ್ನು ರೂಪಿಸುವುದು ಮುಖ್ಯವಾಗಿದೆ. ರೈತರು ಎದುರಿಸುತ್ತಿರುವ ವಿದ್ಯುತ್ ವ್ಯತ್ಯಯ ಮತ್ತು ಕಡಿಮೆ ವೋಲ್ಟೇಜ್ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಸರ್ಕಾರ ಮತ್ತು ಇಂಧನ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Edited By :
Kshetra Samachara

Kshetra Samachara

27/10/2026 07:16 pm

Cinque Terre

580

Cinque Terre

0

ಸಂಬಂಧಿತ ಸುದ್ದಿ