ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೈನ್ ನಿಗಮ ಮಂಡಳಿ ಸ್ಥಾಪನೆ ಮಾಡದಿದ್ರೆ ಹೋರಾಟ; ಗುಣಧರನಂದಿ ಮಹಾರಾಜರು ಎಚ್ಚರಿಕೆ

ಹುಬ್ಬಳ್ಳಿ: ಜೈನ್ ನಿಗಮ ಮಂಡಳಿ ಸ್ಥಾಪನೆ ಸೇರಿದಂತೆ ಸಮುದಾಯದ ಪ್ರಮುಖ ಬೇಡಿಕೆಗಳನ್ನು 10 ದಿನದೊಳಗೆ ಈಡೇರಿಸದಿದ್ದರೆ, ಸುವರ್ಣಸೌಧದ ಎದುರು ದೇಹತ್ಯಾಗದ ಹೋರಾಟ ಆರಂಭಿಸಲಾಗುವುದು ಎಂದು ರಾಷ್ಟ್ರಸಂತ ಆಚಾರ್ಯ ಶ್ರೀ 108 ಗುಣಧರನಂದಿ ಮಹಾರಾಜರು ರಾಜ್ಯ ಸರ್ಕಾರಕ್ಕೆ ಗಡುವು ನೀಡಿದರು.

ಮಾಧ್ಯಮಕ್ಕೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಜೈನ್ ನಿಗಮ ಮಂಡಳಿ ಸ್ಥಾಪನೆ, ಜೈನ್ ಸನ್ಯಾಸಿಗಳಿಗೆ ರಕ್ಷಣೆ ಹಾಗೂ ಜೈನ್ ತೀರ್ಥಕ್ಷೇತ್ರಗಳ ಸಂರಕ್ಷಣೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದೇವೆ. ಮುಖ್ಯಮಂತ್ರಿಗಳು ಸೇರಿದಂತೆ ಹಲವು ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದರೂ ಕೂಡಾ ಈವರೆಗೆ ಭರವಸೆಗಳಷ್ಟೇ ಸಿಕ್ಕಿವೆ. ಆದರೂ ಬೇಡಿಕೆಗಳು ಈಡೇರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜೈನ್ ಸಮುದಾಯ ರಾಜಕೀಯ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದು, ಸರ್ಕಾರ ಸಮಾನ ನ್ಯಾಯ ನೀಡಬೇಕು. ಕ್ರೈಸ್ತ ಸಮುದಾಯಕ್ಕೆ ನಿಗಮ ಸ್ಥಾಪನೆಯಾಗಿದ್ದರೂ ಜೈನ್ ಸಮುದಾಯದ ಬೇಡಿಕೆ ಕಡೆಗಣಿಸಲಾಗಿದೆ. ಸರ್ಕಾರದ ಅಧಿಕೃತ ಆದೇಶದ ಮೂಲಕ ನ್ಯಾಯ ಒದಗಿಸದಿದ್ದರೆ ಹೋರಾಟ ತೀವ್ರಗೊಳಿಸುವುದು ಅನಿವಾರ್ಯವಾಗಲಿದೆ ಎಂದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

27/10/2026 08:35 pm

Cinque Terre

39.57 K

Cinque Terre

0

ಸಂಬಂಧಿತ ಸುದ್ದಿ