ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ನಿರ್ಣಾ ಗ್ರಾಮದ ಪೆಟ್ರೋಲ್ ಪಂಪ್‌ನಲ್ಲಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಬಾಲರಾಜ ದಾಸುರ ಅವರ ನಿವಾಸಕ್ಕೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಮೃತರ ಕುಟುಂಬದ ದುಃಖದಲ್ಲಿ ಭಾಗಿಯಾದ ಶಾಸಕರು, ವೈಯಕ್ತಿಕ ಧನಸಹಾಯ ನೀಡಿ ಸಂಕಷ್ಟದ ಸಮಯದಲ್ಲಿ ಕುಟುಂಬದ ಬೆನ್ನಿಗೆ ನಿಲ್ಲುವ ಭರವಸೆ ನೀಡಿದರು. ಅಲ್ಲದೆ, ಮೃತರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಕುಟುಂಬಕ್ಕೆ ಎದುರಾಗಿರುವ ಸಂಕಷ್ಟದ ಸಂದರ್ಭದಲ್ಲಿ ಸಾಂತ್ವನ ಹೇಳಿದ ಶಾಸಕರು, ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದರು.
ಮೃತ ಬಾಲರಾಜ ದಾಸುರ ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದರು.
PublicNext
27/10/2026 08:36 pm
LOADING...