ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶೀಲ್ ನಮೋಶಿಗೆ ಭರ್ಜರಿ ಗೆಲುವು!

ಕಲಬುರಗಿ: ಕರ್ನಾಟಕ ವಿಧಾನಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಅವರು ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ವಿರುದ್ಧ ಭರ್ಜರಿ ಇಯ ಸಾಧಿಸಿದ್ದಾರೆ.

ಮೊದಲ ಸುತ್ತಿನ ಪ್ರಥಮ ಪ್ರಾಶಸ್ತ್ಯದ ಮತಗಳ ಎಣಿಕೆಯಲ್ಲಿ ಶಶೀಲ್ ನಮೋಶಿ ಅವರು ಶರಣಪ್ಪ ಮಟ್ಟೂರು ಅವರಿಗಿಂತ 1,529 ಮತಗಳ ಮುನ್ನಡೆ ಸಾಧಿಸಿದ್ದರು. ಎರಡನೇ ಸುತ್ತಿನಲ್ಲೂ ತಮ್ಮ ಮುನ್ನಡೆ ಮುಂದುವರಿಸಿದ ನಮೋಶಿ, 3 ಸಾವಿರಕ್ಕೂ ಹೆಚ್ಚು ಮತಗಳ ಅಂತರ ಕಾಯ್ದುಕೊಂಡಿದ್ದಾರೆ.

ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ನಡೆದ ನಾಲ್ಕು ವಿಧಾನ ಪರಿಷತ್ ಚುನಾವಣೆಗಳಲ್ಲಿ ಪ್ರಜ್ಞಾವಂತ ಮತದಾರರು ಸರ್ಕಾರಕ್ಕೆ ಪಾಠ ಕಲಿಸಿದ್ದಾರೆ. ಶಿಕ್ಷಕರು ಮತ್ತು ಪದವೀಧರರು ಡಿ.ಕೆ. ಶಿವಕುಮಾರ್ ಅವರಿಗೆ ತಕ್ಕ ಉತ್ತರ ನೀಡಿದ್ದಾರೆ. ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಹೇಳುವ ಡಿ. ಕೆ. ಶಿವಕುಮಾರ್ ಅವರಿಗೂ ಈ ಚುನಾವಣೆಯ ಮೂಲಕ ಮತದಾರರು ಸಂದೇಶ ನೀಡಿದ್ದಾರೆ ಎಂದು ಅವರು ಹೇಳಿದರು.

ಈ ನಾಲ್ಕು ಚುನಾವಣೆಯ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಎನ್. ರವಿಕುಮಾರ್ ಅಭಿಪ್ರಾಯಪಟ್ಟರು.

Edited By :
PublicNext

PublicNext

27/10/2026 09:09 pm

Cinque Terre

11.09 K

Cinque Terre

2

ಸಂಬಂಧಿತ ಸುದ್ದಿ