ಕೊಪ್ಪಳ: ಕೃಷ್ಣಾ ಬಿ ಸ್ಕೀಮ್‌ನಡಿ ಕುಷ್ಟಗಿ–ಯಲಬುರ್ಗಾ, ಕೊಪ್ಪಳ–ಕನಕಗಿರಿ ತಾಲೂಕುಗಳ ಕೆರೆಗಳನ್ನು ತುಂಬಿಸುವ ಯೋಜನೆ ನೆನೆಗುದಿಗೆ ಬಿದ್ದಿರುವುದನ್ನು ಖಂಡಿಸಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.
ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇರಕಲ್‌ಗಡ ಹೋಬಳಿಗೂ ಅನ್ಯಾಯವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಸಂಗಮೇಶ ಸುಗ್ರೀವ್ ಆರೋಪಿಸಿದರು. ಮನವಿಗೆ ಸ್ಪಂದಿಸದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ಚುನಾವಣೆ ಬಹಿಷ್ಕರಿಸಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಕೃಷ್ಣಾ ಬಿ ಸ್ಕೀಮ್ ಯೋಜನೆಯಡಿ ಜಿಲ್ಲೆಯ ವಿವಿಧ ತಾಲೂಕುಗಳ ಕೆರೆಗಳನ್ನು ತುಂಬಿಸುವ ಉದ್ದೇಶ ಹೊಂದಿರುವ ಯೋಜನೆಯು ಕಳೆದ ಸುಮಾರು ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಆಯ್ದ ಕೆಲವು ತಾಲೂಕುಗಳಿಗೆ ಮಾತ್ರ ನೀರು ಹರಿಸಲಾಗಿದ್ದು, ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮೀಣ ಭಾಗದ ಕೆರೆಗಳಿಗೆ ಇನ್ನೂ ನೀರು ತುಂಬಿಸಿಲ್ಲ ಎಂದು ರೈತಪರ ಹೋರಾಟಗಾರ ಸುಗ್ರೀವ್ ಆರೋಪಿಸಿದ್ದಾರೆ.
ಜಿಲ್ಲೆಯ ವಿವಿಧ ಭಾಗಗಳ ಕೆರೆಗಳನ್ನು ತುಂಬಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸುವುದು ಹಾಗೂ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಆದರೆ, ಯೋಜನೆಯ ಅನುಷ್ಠಾನದಲ್ಲಿ ತಾರತಮ್ಯವಾಗಿದ್ದು, ಕೆಲವು ಪ್ರದೇಶಗಳಿಗೆ ಮಾತ್ರ ನೀರು ಹರಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಹತ್ತು ವರ್ಷಗಳಿಂದ ಕೆರೆ ತುಂಬಿಸುವ ಯೋಜನೆ ನೆನೆಗುದಿಗೆ ಬಿದ್ದಿರುವುದರಿಂದ ಗ್ರಾಮೀಣ ಭಾಗದ ರೈತರು ಸಮಸ್ಯೆ ಎದುರಿಸುವಂತಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
PublicNext
27/10/2026 10:45 pm
LOADING...