ವಿಜಯಪುರ : ಸಾರ್ವಜನಿಕರು ಕಳೆದುಕೊಂಡ ಹಾಗೂ ಕಳ್ಳತನವಾಗಿದ್ದ ಮೊಬೈಲ್‌ಗಳನ್ನು ಪತ್ತೆಹಚ್ಚುವಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಸಾಧನೆ ಮಾಡಿದೆ. ಜಿಲ್ಲೆಯಾದ್ಯಂತ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು ₹1.07 ಕೋಟಿ ಮೌಲ್ಯದ 537 ಮೊಬೈಲ್‌ಗಳನ್ನು ಪತ್ತೆಹಚ್ಚಲಾಗಿದ್ದು, ಅವುಗಳನ್ನು ಸಂಬಂಧಪಟ್ಟ ಮಾಲೀಕರಿಗೆ ಮರಳಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಸಾರ್ವಜನಿಕರ ದೈನಂದಿನ ಬದುಕಿನ ಅತ್ಯಗತ್ಯ ಸಾಧನವಾಗಿದೆ. ಮೊಬೈಲ್ ಕಳೆದುಹೋದ ಅಥವಾ ಕಳ್ಳತನವಾದ ಕುರಿತು ಪೊಲೀಸ್ ಠಾಣೆಗಳಲ್ಲಿ ಪ್ರತಿದಿನ ದೂರುಗಳು ದಾಖಲಾಗುತ್ತಿವೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಮೊಬೈಲ್‌ಗಳ ಪತ್ತೆಗೆ ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ.
ವಿಜಯಪುರ ಜಿಲ್ಲೆಯ ಎಲ್ಲ 28 ಪೊಲೀಸ್ ಠಾಣೆಗಳಲ್ಲಿಯೂ ಸಿಇಐಆರ್ ಪೋರ್ಟಲ್ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುತ್ತಿದೆ. ಈವರೆಗೆ ಒಟ್ಟು 537 ಮೊಬೈಲ್‌ಗಳನ್ನು ಪತ್ತೆಹಚ್ಚಲಾಗಿದ್ದು, ಅವುಗಳ ಅಂದಾಜು ಮೌಲ್ಯ ₹1,07,40,000 ಇದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು.
ಇನ್ನೂ ಇದೇ ವೇಳೆ ವಶಪಡಿಸಿಕೊಂಡ ಮೊಬೈಲ್ ಪೋನ್ ಗಳನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ಮೂಲ ಮಾಲೀಕರಿಗೆ ಹಸ್ತಾಂತರಿಸಿದರು.
PublicNext
28/10/2026 02:16 pm
LOADING...