ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಕಸ್ಮಿಕ ಬೆಂಕಿಗೆ ಗುಡಿಸಲು ಸುಟ್ಟು ಭಸ್ಮ!

ರಾಮನಗರ : ಚನ್ನಪಟ್ಟಣ ತಾಲೂಕಿನ ಮೆಣಸಿಗನಹಳ್ಳಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಗುಡಿಸಲು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ಗ್ರಾಮದ ಸಾಕಮ್ಮ ಹಾಗೂ ಮರಿಯಣ್ಣ ದಂಪತಿಗೆ ಸೇರಿದ ಗುಡಿಸಲಿನಲ್ಲಿ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ.

ಅದೃಷ್ಟವಶಾತ್ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಕಟ್ಟಲು ಹಸುವನ್ನು ಮಾರಿ, ಗುಡಿಸಲಿನಲ್ಲಿ ಎರಡು ಲಕ್ಷ ರೂಪಾಯಿ ಹಣ ಇಟ್ಟಿದ್ದ ದಂಪತಿಯ ಬದುಕು ಈಗ ಬೀದಿಗೆ ಬಂದಿದೆ. ಹಣ, ಜಮೀನಿನ ದಾಖಲೆಗಳು ಸೇರಿದಂತೆ ಹಲವು ಗೃಹೋಪಯೋಗಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By :
PublicNext

PublicNext

28/10/2026 04:43 pm

Cinque Terre

5.55 K

Cinque Terre

0

ಸಂಬಂಧಿತ ಸುದ್ದಿ