ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ : ಸಂಸಾರದಲ್ಲಿ ಬಿರುಕು, ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ!

ರಾಮನಗರ : ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ತಾಲೂಕಿನಲ್ಲಿ ನಡೆದಿದೆ.

ರಾಮನಗರ ತಾಲೂಕಿನ ಚಿಕ್ಕಗಂಗವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚನ್ನಪಟ್ಟಣ ತಾಲೂಕಿನ ಮಳೂರು ಪಟ್ಟಣದ ರೋಜಾ (30) ಮೃತ ಮಹಿಳೆ ಎಂದು ತಿಳಿದುಬಂದಿದೆ. ಕಳೆದ ಮೂರು ವರ್ಷಗಳ ಹಿಂದೆ ಸ್ವಾಮಿ ಎಂಬುವವರೊಂದಿಗೆ ರೋಜಾ ವಿವಾಹವಾಗಿದ್ದರು.

ರೋಜಾ ಸಾವಿಗೆ ಪತಿಯ ಕಿರುಕುಳವೇ ಕಾರಣ ಎಂದು ಅವರ ಪೋಷಕರು ಆರೋಪಿಸಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Edited By :
PublicNext

PublicNext

28/10/2026 05:20 pm

Cinque Terre

8.81 K

Cinque Terre

0

ಸಂಬಂಧಿತ ಸುದ್ದಿ