ಬಳ್ಳಾರಿ ನಗರದ ವಾಣಿಜ್ಯ ಕಟ್ಟಡಗಳಲ್ಲಿ ಬೇಸ್‌ಮೆಂಟ್ ಪಾರ್ಕಿಂಗ್ ಜಾಗವನ್ನು ಅಂಗಡಿ, ಗೋದಾಮು ಹಾಗೂ ಕಚೇರಿಗಳಿಗೆ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಇದರಿಂದ ರಸ್ತೆ ಬದಿಯಲ್ಲಿ ವಾಹನಗಳ ನಿಲುಗಡೆ ಹೆಚ್ಚಾಗಿ, ಪಾದಚಾರಿಗಳಿಗೆ ತೊಂದರೆಯಾಗುವುದರ ಜೊತೆಗೆ ಸಂಚಾರ ದಟ್ಟಣೆ ಉಂಟಾಗುತ್ತಿದೆ. ತುರ್ತು ಸೇವೆಗಳಾದ ಆಂಬುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳ ಸಂಚಾರಕ್ಕೂ ಅಡಚಣೆಯಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಸಿದ್ದೇಶ್ ಊಳೂರು ಆರೋಪಿಸಿದ್ದಾರೆ.
ನಿಯಮ ಉಲ್ಲಂಘಿಸಿರುವ ಕಟ್ಟಡಗಳನ್ನು ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಏಳು ದಿನಗಳೊಳಗೆ ವಿಶೇಷ ತಪಾಸಣಾ ತಂಡ ರಚಿಸಿ, ಬೇಸ್‌ಮೆಂಟ್ ಪಾರ್ಕಿಂಗ್ ವ್ಯವಸ್ಥೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಗೋವಿಂದ, ವಿಶ್ವನಾಥ, ಲಿಂಗರೆಡ್ಡಿ, ರಘು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
PublicNext
28/10/2026 06:22 pm
LOADING...