ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: ಬಾರ್ಕೂರಿನಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

ಬ್ರಹ್ಮಾವರ: ಗ್ರಾಮೀಣ ಪ್ರದೇಶದ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಬಾರ್ಕೂರು ಎಜುಕೇಶನ್ ಸೊಸೈಟಿ ಮತ್ತು ಕುಂದಾಪುರದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ನವೆಂಬರ್ 1ರಂದು ಬಾರ್ಕೂರಿನ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿವೇತನ ಪರೀಕ್ಷೆ ಆಯೋಜಿಸಲಾಗಿದ್ದು ಈ ಕುರಿತು ಮಂಗಳವಾರ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಗುಣಮಟ್ಟದ ಪಿಯು ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಒದಗಿಸುವುದು ಸಂಸ್ಥೆಯ ಉದ್ದೇಶವಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪಿಯುಸಿಗೆ ದಾಖಲಾದ 100 ವಿದ್ಯಾರ್ಥಿಗಳಲ್ಲಿ 45 ಮಂದಿಗೆ 9.40 ಲಕ್ಷ ವಿದ್ಯಾರ್ಥಿವೇತನ ನೀಡಲಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್, ಜೆಇಇ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿಎ, ಸಿಎಸ್ ತರಬೇತಿಯ ವ್ಯವಸ್ಥೆಯಿದೆ ಎಂದರು.

ನಮ್ಮ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ಪಡೆದ ಸಮೀದ್ ಪ್ಯಾರೀಸ್ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದಿದ್ದಾನೆ. ಕಳೆದ ವರ್ಷ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳು ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆದಿದ್ದಾರೆ. ವಿದ್ಯಾರ್ಥಿವೇತನವು ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗುವುದರ ಜೊತೆಗೆ ಪ್ರತಿಭಾವಂತರಿಗೆ ಪ್ರೋತ್ಸಾಹ ನೀಡುವ ಉದ್ದೇಶವನ್ನೂ ಹೊಂದಿದೆ.

ನವೆಂಬರ್ 1ರಂದು ವಿದ್ಯಾರ್ಥಿಗಳು ಬೆಳಿಗ್ಗೆ 10.30ಕ್ಕೆ ಕಾಲೇಜು ಆವರಣಕ್ಕೆ ಆಗಮಿಸಿ ಪರೀಕ್ಷೆಗೆ ಮೊದಲು ಹೆಸರು, ವಿಳಾಸ, ಶಾಲೆಯ ಹೆಸರು ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ಸಂಸ್ಥೆ ಸೂಚಿಸಿರುವ ಮೊಬೈಲ್ ಸಂಖ್ಯೆಗೆ ವಾಟ್ಸ್ಯ್ಯಾಪ್ ಮೂಲಕ ಕಳುಹಿಸಿ ನೋಂದಾಯಿಸಿಕೊಳ್ಳಬೇಕು. ನೋಂದಣಿಗಾಗಿ ಗೂಗಲ್ ಫಾರ್ಮ್ ವ್ಯವಸ್ಥೆಯೂ ಇದೆ ಎಂದರು.ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಕೋಶಾಧಿಕಾರಿ ಭರತ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಆಚಾರ್ ಉಪಸ್ಥಿತರಿದ್ದರು.

Edited By : Vinayak Patil
PublicNext

PublicNext

28/10/2026 08:08 pm

Cinque Terre

6.31 K

Cinque Terre

0

ಸಂಬಂಧಿತ ಸುದ್ದಿ