ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪರೀಕ್ಷೆಯಲ್ಲಿ ಉತ್ತಮ ಅಂಕ ತೆಗೆದವರಿಗೆ ವಿಮಾನ ಭಾಗ್ಯ!

ಬೀದರ್ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನದ ಭಾಗ್ಯ ಒದಗಿಸುವ ಮೂಲಕ ಶಿಕ್ಷಕರೊಬ್ಬರು ವಿನೂತನವಾಗಿ ಪ್ರೋತ್ಸಾಹ ನೀಡಿದ್ದಾರೆ.

ಬೀದರ್‌ನ ಕರ್ನಾಟಕ ಪ್ರೌಢಶಾಲೆಯ ಎಂಟು ವಿದ್ಯಾರ್ಥಿಗಳಿಗೆ ಈ ವಿಶೇಷ ಉಡುಗೊರೆ ಸಿಕ್ಕಿದೆ. ಶಾಲೆಯ ವಿಜ್ಞಾನ ಶಿಕ್ಷಕ ರಫೀಕ್ ತಾಳಿಕೋಟಿ ಅವರು ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಈ ಪ್ರೋತ್ಸಾಹ ನೀಡಿದ್ದಾರೆ. ವಿದ್ಯಾರ್ಥಿಗಳು ಬೀದರ್ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಸಾಧಕ ವಿದ್ಯಾರ್ಥಿಗಳಿಗೆ ಶಿಕ್ಷಕರು ನೀಡಿದ ಈ ವಿಶೇಷ ಗೌರವ ಇದೀಗ ರಾಜ್ಯದ ಗಮನ ಸೆಳೆದಿದೆ.

Edited By :
PublicNext

PublicNext

28/10/2026 09:51 pm

Cinque Terre

7.83 K

Cinque Terre

0