ಹಾನಗಲ್ : ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ವಿ. ಸಂಕನೂರ ಅವರು ಕಾಂಗ್ರೆಸ್‌ನ ಮೋಹನ್ ಲಿಂಬಿಕಾಯಿ ವಿರುದ್ಧ 9,323 ಮತಗಳ ಭರ್ಜರಿ ಅಂತರದಿಂದ ಗೆಲುವು ಸಾಧಿಸಿ ಹ್ಯಾಟ್ರಿಕ್ ಜಯ ದಾಖಲಿಸಿದ ಹಿನ್ನೆಲೆಯಲ್ಲಿ, ಹಾನಗಲ್ ಪಟ್ಟಣದ ಕನಕವೃತ್ತದಲ್ಲಿ ಬುಧವಾರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಬಿಜೆಪಿ ಮಂಡಲಾಧ್ಯಕ್ಷ ಮಹೇಶ ಕಮಡೊಳ್ಳಿ ಮಾತನಾಡಿ, “ಈ ಚುನಾವಣೆ 2028ರ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಾಗಿದೆ. ರಾಜ್ಯ ಸರ್ಕಾರದ ದುರಾಡಳಿತವನ್ನು ಪ್ರಜ್ಞಾವಂತ ಮತದಾರರು ತಿರಸ್ಕರಿಸಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರು ಹಾಗೂ ಪ್ರಜ್ಞಾವಂತ ಮತದಾರರ ಗೆಲುವಾಗಿದೆ. ಆಸೆ, ಆಮಿಷಗಳಿಗೆ ಮತದಾರರು ಸೊಪ್ಪು ಹಾಕುವುದಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ” ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಪದ್ಮನಾಭ ಕುಂದಾಪುರ, ಭೋಜರಾಜ ಕರುಡಿ, ಬಿ.ಎಸ್. ಅಕ್ಕಿವಳ್ಳಿ, ನಾಗರಾಜ ಉದಾಸಿ, ಸುನೀಲ ಹಿರೇಮಠ, ರವಿರಾಜ ಕಲಾಲ, ಬಸವರಾಜ ಹಾದಿಮನಿ, ಸುಭಾ ಉಗ್ರಾಣನವರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಲೋಕೇಶ್ ಸುಣಗಾರ್ Public Next ಹಾನಗಲ್
PublicNext
28/10/2026 09:56 pm
LOADING...