ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾರಿಗೆ ಬಸ್ ನಿಲ್ಲಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ!

ಬೀದರ್-ಕಲಬುರಗಿ ರಾಜ್ಯ ಹೆದ್ದಾರಿ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಸಾರಿಗೆ ಬಸ್ ನಿಲ್ಲಿಸುವಂತೆ ಆಗ್ರಹಿಸಿ ಪ್ರೊಟೆಸ್ಟ್ ಮಾಡಿದ್ದಾರೆ.

ಹುಮನಾಬಾದ್‌ ತಾಲೂಕಿನ ಹಳ್ಳಿಖೇಡ ವಾಡಿಯಲ್ಲಿ ಪ್ರತಿಭಟನೆ ಮಾಡಲಾಗಿದೆ. ಸುಮಾರು 2 ಗಂಟೆ ರಸ್ತೆ ತಡೆದು ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಕೆಲಹೊತ್ತು ಸಂಚಾರ ಅಸ್ತವ್ಯಸ್ಥ ಆಗಿ ಪ್ರಯಾಣಿಕರು ಸಮಸ್ಯೆ ಅನುಭವಿಸಿದ್ದಾರೆ. ಕಲಬುರಗಿಯಿಂದ ಬೀದರ್‌‌ಗೆ ಹೋಗುವ, ಬೀದರ್‌ನಿಂದ ಕಲಬುರಗಿಗೆ ತೆರಳುವ ಯಾವುದೇ ಬಸ್ ನಿಲ್ಲುತ್ತಿಲ್ಲವಂತೆ. ಪ್ರತಿನಿತ್ಯ ಹತ್ತಾರು ಬಸ್‌ಗಳು ಈ ಮಾರ್ಗದಲ್ಲಿ ಸಂಚರಿಸುತ್ತಿದ್ದರೂ ಹಳ್ಳಿಖೇಡ (ಕೆ) ವಾಡಿ ಗ್ರಾಮದಲ್ಲಿ ಬಸ್ ನಿಲ್ಲಿಸುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತುಂಬಾ ಸಮಸ್ಯೆಯಾಗುತ್ತಿದೆ ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ತುಂಬಾನೇ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ವಿದ್ಯಾರ್ಥಿಗಳ ಮನವೊಲಿಸಲು ಕೆಕೆಆರ್‌ಟಿಸಿ ಅಧಿಕಾರಿಗಳು ಶತಪ್ರಯತ್ನ ಮಾಡಿದ್ದಾರೆ.

ಕೊನೆಗೆ ಹಳ್ಳಿಖೇಡ (ಕೆ) ವಾಡಿಯಲ್ಲಿ ಬಸ್ ನಿಲುಗಡೆಯ ವ್ಯವಸ್ಥೆ ಮಾಡುತ್ತೇವೆಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

Edited By :
PublicNext

PublicNext

29/10/2026 10:32 am

Cinque Terre

4.17 K

Cinque Terre

0

ಸಂಬಂಧಿತ ಸುದ್ದಿ