ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಾಂಜಾ ಅಡ್ಡೆ ಮೇಲೆ ಪೊಲೀಸ್ ಕಾರ್ಯಾಚರಣೆ

ರಾಯಚೂರು : ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಗುಡ್ಡ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ನಡೆಸಿ, ಸುಮಾರು ₹11.94 ಲಕ್ಷ ಮೌಲ್ಯದ 51 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ದೇವರಗುಡ್ಡ ಗ್ರಾಮದ ಸೀಮಾಂತರ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಸುತ್ತಿರುವ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಈ ವೇಳೆ ಬೆಳೆದಿದ್ದ 51 ಗಾಂಜಾ ಗಿಡಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

ಜಪ್ತಿ ಮಾಡಲಾದ ಹಸಿ ಗಾಂಜಾದ ಒಟ್ಟು ತೂಕ 23 ಕೆ.ಜಿ. 890 ಗ್ರಾಂ ಆಗಿದ್ದು, ಅದರ ಅಂದಾಜು ಮೌಲ್ಯ ₹11,94,500 ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮದರಕಲ್ ಗ್ರಾಮದ ನಿವಾಸಿ ಸಾಬಣ್ಣ (45), ತಂದೆ ಮಹಾದೇವಪ್ಪ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Edited By :
Kshetra Samachara

Kshetra Samachara

29/10/2026 12:07 pm

Cinque Terre

160

Cinque Terre

0