ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುಂಡ್ಲುಪೇಟೆ : ಕರುವಿನ ಮೇಲೆ ಚಿರತೆ ದಾಳಿ: ಮೊಬೈಲ್‌ನಲ್ಲಿ ಸೆರೆಯಾಯ್ತು ರೋಚಕ ದೃಶ್ಯ

ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಬಂಡೀಪುರ–ಮಂಗಲ ಅರಣ್ಯ ಮಾರ್ಗದ ಬಳಿ ಚಿರತೆಯೊಂದು ಕರುವಿನ ಮೇಲೆ ದಾಳಿ ನಡೆಸಿರುವ ಘಟನೆ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಸಂಧರ್ಭದಲ್ಲಿ ಕಾರಿನಲ್ಲಿ ತೆರಳುತ್ತಿದ್ದವರು ದನಗಳ ಹಿಂಡು ಗಾಬರಿಯಿಂದ ಓಡಿಬರುತ್ತಿರುವುದನ್ನು ಗಮನಿಸಿದ್ದಾರೆ. ಈ ವೇಳೆ ಚಿರತೆಯೊಂದು ಕರುವಿನ ಮೇಲೆ ಎರಗಿ ದಾಳಿ ನಡೆಸುತ್ತಿರುವುದು ಕಂಡುಬಂದಿದ್ದು, ಸ್ಥಳೀಯರು ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಚಿರತೆ ದಾಳಿ ನಡೆಸುತ್ತಿದ್ದಂತೆ ಉಳಿದ ದನಗಳು ಭಯದಿಂದ ದಿಕ್ಕಾಪಾಲಾಗಿ ಓಡಿವೆ. ಈ ಹಿಂದೆಯೂ ಅರಣ್ಯದಂಚಿನಲ್ಲಿ ಮೇಯುತ್ತಿದ್ದ ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆಸಿದ ಘಟನೆಗಳು ವರದಿಯಾಗಿದ್ದವು.

Edited By :
PublicNext

PublicNext

29/10/2026 01:21 pm

Cinque Terre

4.73 K

Cinque Terre

0

ಸಂಬಂಧಿತ ಸುದ್ದಿ