ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ಟೋಬರ್ 31 ಕ್ಕೆ ಚಿತ್ರನಟ ಪ್ರಕಾಶ್ ರಾಜ್ ಗೆ ಮಾನವ ರತ್ನ‌ ಪ್ರಶಸ್ತಿ ಪ್ರದಾನ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಪ್ರತಿ ಎರಡು ವರ್ಷಗಳಿಗೊಮ್ಮೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸಾಧನೆಗೈದ ಗಣ್ಯರನ್ನು ಗುರುತಿಸಿ ಕೊಡಲಾಗುವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ವಿವಿಧ ಸಮುದಾಯಗಳ ಸ್ನೇಹ ಸಮಾವೇಶವನ್ನು ಅ.31ರಂದು ಸಂಜೆ 6.30ಕ್ಕೆ ಉಡುಪಿಯ ಬಾಸೆಲ್ ಮಿಷನ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.

ಈ ಕುರಿತು ಮಾಧ್ಯಮದ ಜೊತೆ ಮಾಹಿತಿ ಹಂಚಿಕೊಂಡ ನಿಕಟಪೂರ್ವ ಅಧ್ಯಕ್ಷ ಯಾಸೀನ್ ಮಲ್ಪೆ ,ಸಮಾಜಕ್ಕೆ ವಿಶಿಷ್ಟ ಕೊಡುಗೆ ನೀಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಒಕ್ಕೂಟವು ಪ್ರತಿ ಎರಡು ವರ್ಷಗಳಿಗೊಮ್ಮೆ 'ಮಾನವ ರತ್ನ', 'ಸೇವಾ ರತ್ನ' ಹಾಗೂ 'ಸೌಹಾರ್ದ ರತ್ನ' ಎಂಬ ಮೂರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಿದ್ದು, 2025-26ನೇ ಸಾಲಿನ ಪ್ರಶಸ್ತಿಗಳಿಗೆ ಕ್ರಮವಾಗಿ ಬಹುಭಾಷಾ ಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್, ಎಜ್, ಅನಿವಾಸಿ ಭಾರತೀಯ ಉದ್ಯಮಿ ಹಾಗೂ ಕೊಡುಗೈದಾನಿ ಹಿದಾಯತುಲ್ಲಾ ಅಬ್ಬಾಸ್ ಮತ್ತು ಹಿರಿಯ ಹೋರಾಟಗಾರ, ಲೇಖಕ ಹಾಗೂ ಚಿಂತಕ ಸುರೇಶ್ ಭಟ್ ಬಾಕ್ರಬೈಲು ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.ವಿವಿಧ ಸಮುದಾಯಗಳ ಸ್ನೇಹ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಗಣ್ಯರ ಸಮ್ಮುಖದಲ್ಲಿ ಮೂವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರುಗಳಾದ ಹಂಗಾರಕಟ್ಟೆ ಇಬ್ರಾಹಿಂ ಸಾಹೇಬ್, ಚಂದ್ರಶೇಖರ ಶೆಟ್ಟಿ ಕುಂದಾಪುರ, ಬಿಪಿನ್ ಚಂದ್ರಪಾಲ್ ಕಾರ್ಕಳ, ಗೀತಾ ಸುರೇಶ್ ಕುಮಾರ್, ಜೆರಾಲ್ಡ್ ಪಿಂಟೋ, ಫಾತಿಮಾ ರಲಿಯಾ ಅವರನ್ನು ಸನ್ಮಾನಿಸಲಾಗುವುದು ಎಂದು ಯಾಸೀನ್ ಮಲ್ಪೆ ಮಾಹಿತಿ ನೀಡಿದರು.

ಯಾಸೀನ್ ಮಲ್ಪೆ , ಮುಸ್ಲಿಂ ಒಕ್ಕೂಟ ನಿಕಟಪೂರ್ವ ಅಧ್ಯಕ್ಷ

Edited By :
PublicNext

PublicNext

29/10/2026 02:27 pm

Cinque Terre

9.56 K

Cinque Terre

0

ಸಂಬಂಧಿತ ಸುದ್ದಿ